ನಜರಾಬಾದ್‌ನಲ್ಲಿ ₹1 ಕೋಟಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಹರೀಶ್ ಗೌಡ ಚಾಲನೆ

ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಹರೀಶ್‌ಗೌಡ ಚಾಲನೆ ನೀಡಿದರು. ಡಿ.ನಾಗಭೂಷಣ್, ಮೋಹನ್ ಕುಮಾರ್, ಚಂದ್ರಶೇಖರ್, ಎಸ್.ಆರ್. ರವಿಕುಮಾರ್, ಚಂದ್ರಕಲಾ, ರವಿ ನಾಯಕ್, ಮಹೇಶ್ ಇದ್ದರು.
ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಹರೀಶ್‌ಗೌಡ ಚಾಲನೆ ನೀಡಿದರು. ಡಿ.ನಾಗಭೂಷಣ್, ಮೋಹನ್ ಕುಮಾರ್, ಚಂದ್ರಶೇಖರ್, ಎಸ್.ಆರ್. ರವಿಕುಮಾರ್, ಚಂದ್ರಕಲಾ, ರವಿ ನಾಯಕ್, ಮಹೇಶ್ ಇದ್ದರು.
Published on
ಮೈಸೂರು: ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಜರಾಬಾದ್‌ನ ವಾರ್ಡ್ 40ರಲ್ಲಿ ನಗರಪಾಲಿಕೆ ಅನುದಾನದ ₹1 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ. ಹರೀಶ್ ಗೌಡ ಗುದ್ದಲಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಕಾಮಟಗೇರಿ ಕ್ರಾಸ್, ಮುರುಗಾದೇವಿ ದೇವಸ್ಥಾನ ರಸ್ತೆ, ಮಹಾರಾಷ್ಟ್ರ ಬೀದಿ ಹಾಗೂ ಬಜಾರ್ ರಸ್ತೆಯ 2ನೇ ಕ್ರಾಸ್‌ನಲ್ಲಿ ಚರಂಡಿ ಮತ್ತು ಕಾಂಕ್ರೀಟ್ ರಸ್ತೆ ನಿರ್ಮಾಣ, ಸ್ಟೇಡಿಯಂ ರಸ್ತೆ ಹಿಂಭಾಗದ ರಸ್ತೆಯಲ್ಲಿ ಚರಂಡಿ ಹಾಗೂ ಮರು ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಒಟ್ಟು 620 ಮೀ. ಚರಂಡಿ, 415 ಮೀ. ಕಾಂಕ್ರೀಟ್ ರಸ್ತೆ ಹಾಗೂ 230 ಮೀ. ರಸ್ತೆ ಮರು ಡಾಂಬರೀಕರಣ ಕಾಮಗಾರಿ ನಡೆಯಲಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಹರೀಶ್ ಗೌಡ, ನಜರಾಬಾದ್ ಜನರ ಬಹುದಿನಗಳ ರಸ್ತೆ ಹಾಗೂ ಚರಂಡಿ ಸಮಸ್ಯೆಗೆ ಕಾಮಗಾರಿಯಿಂದ ಶಾಶ್ವತ ಪರಿಹಾರ ದೊರೆಯಲಿದೆ. ಗುಣಮಟ್ಟಕ್ಕೆ ಆದ್ಯತೆ ನೀಡಿ ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.
ದೇವರಾಜ ಬ್ಲಾಕ್ ಅಧ್ಯಕ್ಷ ಡಿ. ನಾಗಭೂಷಣ್, ಚಂದ್ರಕಲಾ ವಾರ್ಡ್ ಅಧ್ಯಕ್ಷ ಮೋಹನ್ ಕುಮಾರ್, ಮುಖಂಡರಾದ ಚಂದ್ರಶೇಖರ್, ಎಸ್.ಆರ್. ರವಿಕುಮಾರ್, ರವಿ ನಾಯಕ್, ಮಹೇಶ್, ಪಾಲಿಕೆ ವಲಯ ಅಭಿವೃದ್ಧಿ ಅಧಿಕಾರಿ ಜಗದೀಶ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net