ಚಾಮರಾಜ ಕ್ಷೇತ್ರದಲ್ಲಿ ಭೂಮಿಪೂಜೆ ನೆರವೇರಿಸಿದ ಶಾಸಕ ಕೆ. ಹರೀಶ್‌ಗೌಡ
ಚಾಮರಾಜ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಹರೀಶ್‌ಗೌಡ ಚಾಲನೆ ನೀಡಿದರು. ರವಿ ಮಂಚೇಗೌಡನಕೊಪ್ಪಲು, ಪುಷ್ಪಲತಾ ಚಿಕ್ಕಣ್ಣ, ಜೆ.ಗೋಪಿ, ಭಾಸ್ಕರ್‌ಗೌಡ ಇತರರಿದ್ದರು.
ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್‌ಗೌಡ ಶುಕ್ರವಾರ ಕ್ಷೇತ್ರದ ವಾರ್ಡ್ ನಂ.21ರಲ್ಲಿ ಒಟ್ಟು 1.55 ಕೋಟಿ ರೂ.ವೆಚ್ಚದ ಎರಡು ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ. ಹರೀಶ್‌ಗೌಡ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.
ನಗರಪಾಲಿಕೆ ಅನುದಾನದಡಿ 80 ಲಕ್ಷ ರೂ. ವೆಚ್ಚದಲ್ಲಿ ಬಿಸಿಲು ಮಾರಮ್ಮ ದೇವಸ್ಥಾನದ ಹಿಂಭಾಗದ ರಸ್ತೆ, ಗಿರಿಗೌಡ ಮಾರ್ಗ ಹಾಗೂ ಜವರೇಗೌಡರ ಮನೆ ಮುಂಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿದರು.
ವಿಜಯಶ್ರೀಪುರದಲ್ಲಿ 75 ಲಕ್ಷ ರೂ. ವೆಚ್ಚದಲ್ಲಿ ದೊಡ್ಡ ಮಳೆನೀರು ಚರಂಡಿ ಅಭಿವೃದ್ಧಿ ಕಾಮಗಾರಿಗೂ ಭೂಮಿಪೂಜೆ ನೆರವೇರಿಸಲಾಯಿತು. ಮಳೆಗಾಲದಲ್ಲಿ ನೀರು ನಿಲ್ಲುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದು ಕಾಮಗಾರಿಯ ಉದ್ದೇಶವಾಗಿದೆ.
ಶಾಸಕ ಕೆ.ಹರೀಶ್‌ಗೌಡ ಮಾತನಾಡಿ, ಚಾಮರಾಜ ಕ್ಷೇತ್ರದ ಪ್ರತಿ ವಾರ್ಡ್‌ನಲ್ಲೂ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಬದ್ಧನಾಗಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಇಂದಿರಾಗಾಂಧಿ ಬ್ಲಾಕ್ ಅಧ್ಯಕ್ಷ ರವಿ ಮಂಚೇಗೌಡನಕೊಪ್ಪಲು, ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ, ನಗರಪಾಲಿಕೆ ಮಾಜಿ ಸದಸ್ಯ ಜೆ.ಗೋಪಿ, ಮುಖಂಡರಾದ ಭಾಸ್ಕರ್‌ಗೌಡ, ಶ್ರೀನಿವಾಸ್, ರವಿ ಪೂಜು, ಮಹೇಶ್, ಸುಧೀರ್, ಪಾಲಿಕೆ ವಲಯ ಅಭಿವೃದ್ಧಿ ಅಧಿಕಾರಿ ಸತ್ಯಮೂರ್ತಿ ಇತರರಿದ್ದರು.