ಅಭಿವೃದ್ಧಿ ಕಾರ್ಯಕ್ಕೆ ಶಾಸಕರಿಂದ ವಿಶೇಷ ಆದ್ಯತೆ

ಸರಗೂರು ಪಟ್ಟಣದ 9ನೇ ವಾರ್ಡಿನಲ್ಲಿ ಕೈಗೊಂಡಿರುವ ಸಿಸಿ ರಸ್ತೆ ಕಾಮಗಾರಿಯನ್ನು ಪಪಂ ಸದಸ್ಯ ಶ್ರೀನಿವಾಸ ಪರಿಸೀಲಿಸಿದರು.
ಸರಗೂರು ಪಟ್ಟಣದ 9ನೇ ವಾರ್ಡಿನಲ್ಲಿ ಕೈಗೊಂಡಿರುವ ಸಿಸಿ ರಸ್ತೆ ಕಾಮಗಾರಿಯನ್ನು ಪಪಂ ಸದಸ್ಯ ಶ್ರೀನಿವಾಸ ಪರಿಸೀಲಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • development work

ಸರಗೂರು:

ಪಟ್ಟಣದ 9ನೇ ವಾರ್ಡಿನ ಅಭಿವೃದ್ಧಿಗೆ ಶಾಸಕರಾದ ಅನಿಲ್ ಚಿಕ್ಕಮಾದು ಅವರು ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಇದೀಗ ಸಿಸಿ ರಸ್ತೆ ನಿರ್ಮಾಣ ಮಾಡುತ್ತಿರುವುದರಿಂದ ಬಹುದಿನಗಳ ಸಮಸ್ಯೆಗೆ ಪರಿಹಾರ ಸಿಕ್ಕಿದೆ ಎಂದು ಪಪಂ ಸದಸ್ಯ ಶ್ರೀನಿವಾಸ ತಿಳಿಸಿದರು.

35 ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯನ್ನು ಬುಧವಾರ ಪರಿಶೀಲಿಸಿ ಮಾತನಾಡಿದ ಅವರು, 9ನೇ ವಾರ್ಡಿನಲ್ಲಿ ರಸ್ತೆಗಳು ಹದಗೆಟ್ಟಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಇದೀಗ ಸಮಸ್ಯೆಗೆ ಪರಿಹಾರ ಸಿಕ್ಕಿದೆ. ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರು ವಿಶೇಷ ಆದ್ಯತೆ ನೀಡುತ್ತಿದ್ದು, ಸಾರ್ವಜನಿಕರ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಿ ಅನುದಾನ ಬಿಡುಗಡೆ ಮಾಡುತ್ತಿರುವುದು ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ನಿವಾಸಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net