ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಆನೆಗಳು ಕೃಷಿ ಭೂಮಿ ಮತ್ತು ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿರುವ ಘಟನೆಗಳು ನಿರಂತರವಾಗಿ ಹೆಚ್ಚುತ್ತಿದ್ದು, ಇದು ಜನರ ಪ್ರಮುಖ ಸಮಸ್ಯೆಯಾಗಿ ಪರಿಣಮಿಸಿದೆ. ಆನೆಗಳ ದಾಳಿಯಿಂದ ಮಾನವ ಜೀವಹಾನಿ, ಗಾಯಗಳು, ಬೆಳೆ ನಷ್ಟ, ಆಸ್ತಿ ಹಾನಿ ಮತ್ತು ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗುತ್ತಿದೆ. ವಿಶೇಷವಾಗಿ ಅರಣ್ಯದಂಚಿನ ಗ್ರಾಮಗಳಲ್ಲಿ ವಾಸಿಸುವ ರೈತರು ಮತ್ತು ಕಾರ್ಮಿಕರು ಈ ಸಮಸ್ಯೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಸಚಿವರ ಗಮನಕ್ಕೆ ತಂದರು.