ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧನ

ಕೊಲೆ ಆರೋಪಿ ತಾವುಹಿದ್ ಪಾಷ.
ಕೊಲೆ ಆರೋಪಿ ತಾವುಹಿದ್ ಪಾಷ.
Published on
ಎಚ್.ಡಿ.ಕೋಟೆ: ದೂರದ ಸಂಬಂಧಿಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಪಟ್ಟಣದ ಮುಸ್ಲಿಂ ಬ್ಲಾಕ್ ನಿವಾಸಿ ತಾವುಹಿದ್ ಪಾಷ ಬಂಧಿತ ಆರೋಪಿ. ಎರಡು ದಿನಗಳ ಹಿಂದೆ ಪಟ್ಟಣದ ಮುಸ್ಲಿಂ ಬ್ಲಾಕ್ ನಿವಾಸಿ, ಬಂಧಿಕ ಸಹೋದರ ಮೊಹಮ್ಮದ್ ರಫಿಯನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ.
ಜಿಲ್ಲಾ ಪೊಲೀಸ್ ವರಿವ್ಠಾಧಿಕಾರಿಗಳು, ಪಟ್ಟಣದ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಗಂಗಾಧರ್ ನೇತೃತ್ವದಲ್ಲಿ ಆರೋಪಿ ಪತ್ತೆಗೆ ತಂಡ ರಚನೆ ಮಾಡಿ, ವಿವಿಧ ಜಿಲ್ಲೆಗಳಲ್ಲಿ ಹುಡುಕಾಟ ನಡೆಸಲಾಗಿತ್ತು. ಆರೋಪಿ ಹುಣಸೂರು ಪಟ್ಟಣದಲ್ಲಿ ಇರುವ ಬಗ್ಗೆ ಶುಕ್ರವಾರ ಖಚಿತ ಮಾಹಿತಿ ಮೇರೆಗೆ ಬೆಳಗ್ಗೆ 6 ಗಂಟೆ ಸಮಯದಲ್ಲಿ ಹುಣಸೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಬೇರೆಡೆಗೆ ಹೋಗಲು ಪ್ರಯತ್ನಿಸುತ್ತಿದ್ದಾಗ ಆರೋಪಿಯನ್ನು ಪೊಲೀಸ್ ಇನ್‌ಸ್ಪೆಕ್ಟರ್ ಗಂಗಾಧರ್, ಸಿಬ್ಬಂದಿ ಸೈಯದ್ ಕಬೀರ್, ಯೋಗೇಶ್, ಮೋಹನ್ ಹಾಗೂ ಬೀರಪ್ಪ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಆರೋಪಿ ತಾವುಹಿದ್ ಪಾಷನನ್ನು ಆರೋಗ್ಯ ತಪಾಸಣೆ ನಡೆಸಿದ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net