'ಕಡ್ಡಾಯವಾಗಿ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳಿ'

ವಿಶ್ವ ಗ್ರಾಹಕರ ದಿನಾಚರಣೆ ಅಂಗವಾಗಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್‌ನಿಂದ ಜಾಗೃತಿ ಕರಪತ್ರ ವಿತರಣೆಗೆ ಚಾಲನೆ ನೀಡಲಾಯಿತು. ಡಾ.ರವಿಶಂಕರ್, ಶ್ರೀಕಂಠೇಶ್,  ವಿಕ್ರಂ ಅಯ್ಯಂಗಾರ್, ನಗರಪಾಲಿಕೆ ಮಾಜಿ ಸದಸ್ಯ ಜಗದೀಶ್, ಅರಿವು ಸಂಸ್ಥೆ ಅಧ್ಯಕ್ಷ ಶ್ರೀಕಾಂತ ಕಶ್ಯಪ್, ಮುಖಂಡರಾದ ಅಪೂರ್ವ ಸುರೇಶ್, ಆನಂದ ಇತರರು ಇದ್ದರು.
ವಿಶ್ವ ಗ್ರಾಹಕರ ದಿನಾಚರಣೆ ಅಂಗವಾಗಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್‌ನಿಂದ ಜಾಗೃತಿ ಕರಪತ್ರ ವಿತರಣೆಗೆ ಚಾಲನೆ ನೀಡಲಾಯಿತು. ಡಾ.ರವಿಶಂಕರ್, ಶ್ರೀಕಂಠೇಶ್, ವಿಕ್ರಂ ಅಯ್ಯಂಗಾರ್, ನಗರಪಾಲಿಕೆ ಮಾಜಿ ಸದಸ್ಯ ಜಗದೀಶ್, ಅರಿವು ಸಂಸ್ಥೆ ಅಧ್ಯಕ್ಷ ಶ್ರೀಕಾಂತ ಕಶ್ಯಪ್, ಮುಖಂಡರಾದ ಅಪೂರ್ವ ಸುರೇಶ್, ಆನಂದ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಗ್ರಹಕರ ಹಕ್ಕುಗಳ ಜೊತೆಗೆ ಸಂವಿಧಾನ ನೀಡಿರುವ ಹಕ್ಕುಗಳ ಬಗ್ಗೆಯೂ ತಿಳಿಸಬೇಕು
  • ಪ್ರತಿ ಜಿಲ್ಲೆಯಲ್ಲಿರುವ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಸಲ್ಲಿಸಬಹುದು
ಮೈಸೂರು:ಸಮಾಜದ ಪ್ರತಿಯೊಬ್ಬರೂ ಕಡ್ಡಾಯವಾಗಿ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳಬೇಕು. ಇದರಿಂದ ವಂಚನೆಗೆ ಒಳಗಾಗದೆ ಜಾಗೃತವಾಗಿರಬಹುದು ಎಂದು ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ರಾಜ್ಯ ಶಿಕ್ಷಣ ಸಂಚಾಲಕ ಡಾ.ರವಿಶಂಕರ್ ಹೇಳಿದರು.
ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದಿಂದ ನಗರದ ಚಾಮುಂಡಿಪುರಂ ವೃತ್ತದಲ್ಲಿ ಆಯೋಜಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆಯಲ್ಲಿ ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಕರಪತ್ರ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.
ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡಲು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದರ ಜತೆಗೆ ಸಂವಿಧಾನ ನೀಡಿರುವ ಹಕ್ಕುಗಳ ಬಗ್ಗೆಯೂ ತಿಳಿಸಬೇಕು. ಸರ್ಕಾರ ಗ್ರಾಹಕ ಸಂರಕ್ಷಣಾ ಕಾಯ್ದೆಯಡಿ ಜಾರಿಗೆ ತಂದು ಗ್ರಾಹಕರಿಗೆ ನ್ಯಾಯ ಪಡೆಯಲು ಅವಕಾಶ ಮಾಡಿಕೊಟ್ಟಿದೆ ಎಂದರು.
ಗ್ರಾಹಕರಿಗೆ ಮಾರಾಟವಾಗುವ ಪ್ರತಿ ವಸ್ತು, ಸರಕು ಮತ್ತು ಸೇವೆಗಳ ಮೌಲ್ಯ, ವೆಚ್ಚ ಹಾಗೂ ಗುಣಮಟ್ಟದ ಬಗ್ಗೆ ಸಂಪೂರ್ಣ ಮಾಹಿತಿ ಗ್ರಾಹಕರಿಗೆ ಸಿಗಬೇಕು. ಗ್ರಾಹಕರ ಹಕ್ಕುಗಳನ್ನು ತಿಳಿಸುವ ಉದ್ದೇಶದಿಂದ ಗ್ರಾಹಕ ದಿನಾಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಗ್ರಾಹಕರ ಸಂರಕ್ಷಣಾ ಕಾಯ್ದೆಯಡಿ ದೂರುಗಳನ್ನು ಪ್ರತಿ ಜಿಲ್ಲೆಯಲ್ಲಿರುವ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಸಲ್ಲಿಸಬಹುದು. ಗ್ರಾಹಕರಿಗೆ ಸರಕುಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕು, ಶಿಕ್ಷಣ ಮತ್ತು ವ್ಯವಹಾರದ ಜಾಗೃತಿ ಹಕ್ಕು, ಅವಧಿ ಮುಗಿದ ಸರಕುಗಳ ಬಗ್ಗೆ ದೂರು ನೀಡುವ ಹಕ್ಕುಗಳನ್ನು ಕಾಯ್ದೆ ನೀಡಿದೆ ಎಂದು ಹೇಳಿದರು.
ಸಮಿತಿ ಜಿಲ್ಲಾ ಕಾರ್ಯದರ್ಶಿ ಶ್ರೀಕಂಠೇಶ್ ಮಾತನಾಡಿ, 1962ರಲ್ಲಿ ಅಮೆರಿಕದ ಅಧ್ಯಕ್ಷ ಜಾನ್ ಎಫ್.ಕೆನಡಿ ಗ್ರಾಹಕರ ಹಕ್ಕುಗಳ ಕಾಯ್ದೆಯನ್ನು ಜಾರಿಗೆ ತಂದರು. ಅಂದಿನಿಂದ ಮಾರ್ಚ್ 15ರಂದು ವಿಶ್ವ ಗ್ರಾಹಕರ ಹಕ್ಕುಗಳ ದಿನ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದ ಉದ್ದೇಶ ಗ್ರಾಹಕರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದಾಗಿದೆ ಎಂದರು.
2019ರ ಕಾಯ್ದೆ ಪ್ರಕಾರ ಗ್ರಾಹಕರು ದೂರುಗಳನ್ನು ಆನ್‌ಲೈನ್ ಮುಖಾಂತರವೂ ನೀಡಬಹುದು. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಸೂಕ್ತ ನ್ಯಾಯ ಒದಗಿಸುವ ಅಧಿಕಾರವನ್ನು ಆಯೋಗ ಹೊಂದಿದೆ ಎಂದರು.
ಸಮಿತಿ ಜಿಲ್ಲಾ ಉಪಾಧ್ಯಕ್ಷ ವಿಕ್ರಂ ಅಯ್ಯಂಗಾರ್, ನಗರಪಾಲಿಕೆ ಮಾಜಿ ಸದಸ್ಯ ಜಗದೀಶ್, ಅರಿವು ಸಂಸ್ಥೆ ಅಧ್ಯಕ್ಷ ಶ್ರೀಕಾಂತ ಕಶ್ಯಪ್, ಮುಖಂಡರಾದ ಅಪೂರ್ವ ಸುರೇಶ್, ಆನಂದ, ದೂರ ರಾಜಣ್ಣ, ಶಿವಲಿಂಗಸ್ವಾಮಿ, ಜತ್ತಿ ಪ್ರಸಾದ್, ಆದರ್ಶ, ಧರ್ಮೇಂದ್ರ, ಜಯರಾಮ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net