ಪ್ರಬುದ್ಧ ಭಾರತ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದು

ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಛಲವಾದಿ ಮಹಾಸಭಾ ವತಿಯಿಂದ ಸಂವಿಧಾನ ದಿನಾಚರಣೆಯ ಅಂಗವಾಗಿ ಸಂವಿಧಾನದ ಪರಿಕಲ್ಪನೆಯಡಿ ಪ್ರಬುದ್ಧ ಭಾರತ ವಿಚಾರ ಸಂಕಿರಣ ವಿಷಯದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.  ಬುದ್ಧ ವಿಹಾರದ ಮನೋರಖ್ಬಿತ ಬಂತೇಜಿ, ಅಭಿ ನಾಗಭೂಷಣ್ ಸೇರಿದಂತೆ ಇತರರು ಇದ್ದರು.
ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಛಲವಾದಿ ಮಹಾಸಭಾ ವತಿಯಿಂದ ಸಂವಿಧಾನ ದಿನಾಚರಣೆಯ ಅಂಗವಾಗಿ ಸಂವಿಧಾನದ ಪರಿಕಲ್ಪನೆಯಡಿ ಪ್ರಬುದ್ಧ ಭಾರತ ವಿಚಾರ ಸಂಕಿರಣ ವಿಷಯದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಬುದ್ಧ ವಿಹಾರದ ಮನೋರಖ್ಬಿತ ಬಂತೇಜಿ, ಅಭಿ ನಾಗಭೂಷಣ್ ಸೇರಿದಂತೆ ಇತರರು ಇದ್ದರು.
Published on
ನಂಜನಗೂಡು: ದೇಶವನ್ನು ಪ್ರಬುದ್ಧ ಭಾರತ ನಿರ್ಮಾಣ ಮಾಡುವಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಛಲವಾದಿ ಮಹಾಸಭಾ ವತಿಯಿಂದ ಸಂವಿಧಾನ ದಿನಾಚರಣೆಯ ಅಂಗವಾಗಿ ಸೋಮವಾರ ಸಂವಿಧಾನದ ಪರಿಕಲ್ಪನೆಯಡಿ ಪ್ರಬುದ್ಧ ಭಾರತ ವಿಚಾರ ಸಂಕಿರಣವನ್ನು ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಭಾರತದ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನದ ಅರಿವು ಮೂಡಿಸುವುದು ಅಗತ್ಯವಾಗಿದೆ. ಇತ್ತೀಚೆಗೆ ಸಂವಿಧಾನ ಮತ್ತು ಅಂಬೇಡ್ಕರ್ ಅವರ ವಿರುದ್ಧ ಮಾತನಾಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿರುವುದು ನಡೆಯುತ್ತಿದೆ. ನಾವು ಸಂವಿಧಾನ ಮತ್ತು ಕಾನೂನಿನ ಬಗ್ಗೆ ತಿಳಿದುಕೊಂಡಾಗ ಮಾತ್ರ ಸಂವಿಧಾನ ನಮಗೆ ಅರ್ಥವಾಗಲಿದೆ. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿದ್ದರು. ಅವರ ಆಶಯದಂತೆ ಪಾಲಕರು ತಮ್ಮ ಮಕ್ಕಳಿಗೂ ಉತ್ತಮ ವಿದ್ಯಾಭ್ಯಾಸ ಕೊಡಿಸಿ, ಉತ್ತಮ ವ್ಯಕ್ತಿಯನ್ನಾಗಿ ರೂಪಿಸಬೇಕಿದೆ ಎಂದು ತಿಳಿಸಿದರು.
ಹೈಕೋರ್ಟ್ ವಕೀಲ ಎಚ್. ಮೋಹನ್‌ಕುಮಾರ್ ಮಾತನಾಡಿ, ಜ.26 ರನ್ನು ನಾವು ನಿಜವಾಗಿ ಸಂವಿಧಾನ ದಿನ ಎಂದೇ ಆಚರಿಸಬೇಕು. ಪ್ರಜೆಗಳಿಂದ ಬರುತ್ತಿರುವ ತೆರಿಗೆ ಹಣದಿಂದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸಂಬಳವನ್ನು ತೆಗೆದುಕೊಳ್ಳುತ್ತಿದ್ದಾರೆ. ಪ್ರಜೆಗಳೇ ಪ್ರಭುಗಳಾಗಿರುವುದರಿಂದ ಅವರ ಕೆಲಸ ಕಾರ್ಯಗಳನ್ನು ಸರಿಯಾದ ಸಮಯಕ್ಕೆ ಮಾಡಬೇಕಾಗಿರುವುದು ಸರ್ಕಾರದ ಕರ್ತವ್ಯ. ಪ್ರಜೆಗಳು ಪ್ರಜಾಪ್ರಭುತ್ವದ ಮಹತ್ವ ತಿಳಿದುಕೊಂಡಾಗ ಮಾತ್ರ ಸಂವಿಧಾನದ ಆಶಯಗಳು ಈಡೇರುತ್ತವೆ ಎಂದರು.
ನಂಜನಗೂಡು ತಾಲೂಕಿನ ಪ್ರೌಢಶಾಲೆಗಳ ಮಕ್ಕಳಿಂದ ನಮ್ಮ ಸಂವಿಧಾನ ವಿಷಯವಾಗಿ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನವನ್ನು ಶಾಸಕ ದರ್ಶನ್ ಧ್ರುವನಾರಾಯಣ ವಿತರಿಸಿದರು.
ಇದಕ್ಕೂ ಮುನ್ನ ನಂಜನಗೂಡು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪಡೆದ ಪದವಿಗಳು ಹಾಗೂ ವಿಶ್ವವಿದ್ಯಾನಿಲಯಗಳ ಚಿತ್ರಪಟದ ಸ್ತಬ್ಧಚಿತ್ರ ಹಾಗೂ ಸಂವಿಧಾನ ಪೀಠಿಕೆಯ ಸ್ತಬ್ಧಚಿತ್ರಕ್ಕೆ ಮಾಜಿ ಶಾಸಕ ಬಿ. ಹರ್ಷವರ್ಧನ್ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಅರ್.ಪಿ. ರಸ್ತೆಯ ಮೂಲಕ ಅಂಬೇಡ್ಕರ್ ಭವನದವರೆಗೆ ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು. ಕಾರ್ಯಕ್ರಮದ ಸಾನ್ನಿಧ್ಯವನ್ನು ಕೊಳ್ಳೇಗಾಲದ ಚೇತನವನ ಬುದ್ಧ ವಿಹಾರದ ಮನೋರಖ್ಬಿತ ಬಂತೇಜಿ ವಹಿಸಿದ್ದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಡಾ.ಸ್ಮಿತಾ ರಾಮು, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಮಾಜಿ ಜಿಪಂ ಸದಸ್ಯ ಚಿಕ್ಕರಂಗನಾಯಕ, ಚಿಂತಕ ಡಾ.ಸುರೇಶ್ ಗೌತಮ್, ಪಟ್ಟಣ ಪೊಲೀಸ್ ಠಾಣೆಯ ಇನ್‌ಸ್ಪ್ಪೆಕ್ಟರ್ ಸಿ.ಎಂ.ರವೀಂದ್ರ, ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ವಿದ್ಯಾಸಾಗರ್, ಜಾಮಿಯಾ ಮಸೀದಿಯ ಗುರುಗಳಾದ ಹಿದಾಯತ್ ಉಲ್ಲಾಖಾನ್ ಸಿದ್ಧಿಖಿ, ಕ್ರೈಸ್ತ ಪಾದ್ರಿಗಳ ಒಕ್ಕೂಟದ ಅಧ್ಯಕ್ಷ ಡಾ.ಜಾನ್ ಮದನ್ ಮೋಹನ್, ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಅಭಿನಾಗಭೂಷಣ್, ತಾಲೂಕು ಅಧ್ಯಕ್ಷ ಉಮೇಶ್ ರಾಜ್, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ, ಪೂರ್ಣಿಮಾ ಯಾಶ್ವಿನ್, ಕಾರ್ಯದರ್ಶಿ ಸ್ಪರ್ಶ, ನಗರಾಧ್ಯಕ್ಷ ರಾಜೇಂದ್ರ, ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಂದ, ಲೀಲಾವತಿ, ಬಂಗಾರ ಸ್ವಾಮಿ, ಸಿ.ಎಂ.ಶಂಕರ್, ಹರಿಯೂರಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net