ರಾವಂದೂರು: ವಿಕಸಿತ ಭಾರತ ಎಂಬ ರಾಷ್ಟ್ರೀಯ ದೃಷ್ಟಿಕೋನಕ್ಕೆ ಅನುಗುಣವಾಗಿ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲು ವಿಬಿ ಜಿ ರಾಮ್ ಜಿ ಕಾರ್ಯಕ್ರಮ ಜಾರಿಗೊಳಿಸಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಭಿ ಮಹಮ್ಮದ್ ತಿಳಿಸಿದರು.
ಪಿರಿಯಾಪಟ್ಟಣ ತಾಲೂಕು ರಾವಂದೂರು ಗ್ರಾಮ ಪಂಚಾಯಿತಿಯಲ್ಲಿ ಗಣರಾಜ್ಯೋತ್ಸವದಂದು ಆಯೋಜಿಸಿದ್ದ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿರುವ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ವರ್ಷಕ್ಕೆ 125 ದಿನಗಳು ಉದ್ಯೋಗ ನೀಡಿ ಪ್ರಗತಿಯುತ ಗ್ರಾಮೀಣ ಭಾರತವನ್ನು ನಿರ್ಮಾಣ ಮಾಡುವ ಉದ್ದೇಶದಿಂದ ಹಾಗೂ ಸಬಲೀಕರಣ ಬೆಳವಣಿಗೆಗೆ ಹೆಚ್ಚು ಆದ್ಯತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಇದೀಗ ನೂತನವಾಗಿ ವಿಬಿ ಜಿ ರಾಮ್ ಜಿ ಎಂಬ ಹೆಸರಿನಲ್ಲಿ ಕಾರ್ಯಕ್ರಮ ರೂಪಿಸಿದೆ. ಈ ಕಾರ್ಯಕ್ರಮದಲ್ಲಿ ನಡೆಯುವ ಕಾಮಗಾರಿಗಳಿಗೆ ಶೇ.60ರಷ್ಟು ಕೇಂದ್ರ ಸರ್ಕಾರ, ಶೇ.40ರಷ್ಟು ರಾಜ್ಯ ಸರ್ಕಾರ ಅನುದಾನ ನೀಡಲಿದೆ ಎಂದು ತಿಳಿಸಿದರು.
ವಿಕಲಚೇತನರಿಗೂ ಸರ್ಕಾರದಿಂದ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಗ್ರಾಪಂ ಅಧ್ಯಕ್ಷೆ ಸುಜಾತಾ ವಾಸು, ಮಾಜಿ ತಾಪಂ ಸದಸ್ಯ ಆರ್.ಸಿ . ಚಂದ್ರು, ಸದಸ್ಯರಾದ ಡಿ.ಜೆ.ಕುಮಾರ, ಮಲ್ಲೇಶ್, ಮಹಾದೇವ, ಪ್ರಭು, ಶಶಿ, ಕಾರ್ಯದರ್ಶಿ ಮಹಾದೇವ್, ದಿನೇಶ್ ಜೈ, ಶಂಕರ್, ಮಹಾದೇವ್, ರಾಜು ಇತರರು ಇದ್ದರು.