ಪಂಚ ಗ್ಯಾರಂಟಿಯಿಂದ ಜನರಿಗೆ ಅನುಕೂಲ

ಶೀಗೆವಾಳು ಗ್ರಾಮದಲ್ಲಿ ಗ್ಯಾರಂಟಿ ಯೋಜನೆಗಳ ಸಮಿತಿಯಿಂದ ಅಧಿಕಾರಿಗಳೊಂದಿಗೆ ಸಾರ್ವಜನಿಕ ಪರಿಶೀಲನಾ ಸಭೆ ಆಯೋಜಿಸಲಾಗಿತ್ತು. ರವಿಕುಮಾರ್, ಉದಯ್ ಶಂಕರ್ ಇತರರು.
ಶೀಗೆವಾಳು ಗ್ರಾಮದಲ್ಲಿ ಗ್ಯಾರಂಟಿ ಯೋಜನೆಗಳ ಸಮಿತಿಯಿಂದ ಅಧಿಕಾರಿಗಳೊಂದಿಗೆ ಸಾರ್ವಜನಿಕ ಪರಿಶೀಲನಾ ಸಭೆ ಆಯೋಜಿಸಲಾಗಿತ್ತು. ರವಿಕುಮಾರ್, ಉದಯ್ ಶಂಕರ್ ಇತರರು.
Published on
ಸಾಲಿಗ್ರಾಮ: ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ಹೆಚ್ಚಿನ ಅನುಕೂಲವಾಗಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಉದಯಶಂಕರ್ ಹೇಳಿದರು.
ತಾಲೂಕಿನ ಶೀಗವಾಳು ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆ ಮತ್ತು ಅರಿವು ಶಿಬಿರ ಉದ್ಘಾಟಿಸಿ ಮಾತನಾಡಿದರು.
ಈ ಯೋಜನೆಗಳನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರವು ಜಾರಿಗೆ ತಂದ ಸಂದರ್ಭದಲ್ಲಿ ವಿರೋಧ ಪಕ್ಷಗಳು ಹಲವು ಟೀಕೆಗಳನ್ನು ಮಾಡುತ್ತಿದ್ದರು. ನಂತರದ ದಿನಗಳಲ್ಲಿ ಕೆಲವು ರಾಜ್ಯಗಳಲ್ಲಿ ಇದೇ ಯೋಜನೆಗಳನ್ನು ಅನುಸರಿಸಿ ವಿರೋಧ ಪಕ್ಷಗಳು ಮುನ್ನಡೆಯುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಜನಸಾಮಾನ್ಯರ ನೋವು ನಲಿವನ್ನು ಹತ್ತಿರದಿಂದ ಕಂಡಿದ್ದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಎಲ್ಲ ವರ್ಗದ ಬಡವರಿಗೆ ಅನುಕೂಲವಾಗಬೇಕೆಂದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ರಾಜ್ಯದಲ್ಲಿ ಅನುಷ್ಠಾನ ಮಾಡುವ ಮೂಲಕ ನುಡಿದಂತೆ ನಡೆಯಲಾಗುತ್ತಿದೆ ಎಂದರು.
ತಾಲೂಕು ಪಂಚಾಯಿತಿ ಇಒ ರವಿಕುಮಾರ್ ಮಾತನಾಡಿ, ಗ್ಯಾರಂಟಿ ಯೋಜನೆಗಳ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಗ್ರಾಮಮಟ್ಟದಲ್ಲೂ ಕೂಡ ಇಂತಹ ಅರಿವು ಶಿಬಿರಗಳನ್ನು ಆಯೋಜಿಸಿ ಜನಸಾಮಾನ್ಯರಿಗೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಯುವ ನಿಧಿ, ಶಕ್ತಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿ ಅದರ ಸದುಪಯೋಗವನ್ನು ಪಡೆದುಕೊಳ್ಳಲು ಎಲ್ಲ ರೀತಿಯ ಕಾರ್ಯ ಮಾಡಲಾಗುವುದು ಎಂದರು.
ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಇಲಾಖೆ ಅಧಿಕಾರಿಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಗ್ರಾಮಸ್ಥರನ್ನು ಒಡಗೂಡಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ಮಾಡಲಾಯಿತು. ಸಿಡಿಪಿಓ ಅಣ್ಣಯ್ಯ, ಸೆಸ್ಕ್ ಎಇಇ ಮಧುಸೂದನ್, ಆಹಾರ ನಿರೀಕ್ಷಕ ಸುರೇಶ್, ಕುಮಾರ್, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ರಾಹುಲ್, ಗ್ರಾಮ ಲೆಕ್ಕಿಗ ತುಕಾರಾಂ, ಗ್ರಾ.ಪಂ. ಅಧ್ಯಕ್ಷೆ ಶಿಲ್ಪಾ, ಉಪಾಧ್ಯಕ್ಷ ಕೃಷ್ಣೇಗೌಡ, ಸದಸ್ಯರಾದ ಡಿ.ಕೃಷ್ಣ, ತುಳಸೀರಾಮ್, ದಮಯಂತಿ, ಮಹದೇವ್, ಸ್ವಾಮಿಗೌಡ, ರೇಣುಕಾ, ಗಾಯತ್ರಿ, ಪಿಡಿಓ ಶ್ರೀಧರ್, ಗ್ಯಾರಂಟಿ ಸಮಿತಿ ಸದಸ್ಯರಾದ ಮಹಾಲಿಂಗು, ಲೋಕೇಶ್, ವಾಸಿಂ ಪಾಷ, ಅನಿಲ್, ಉಷಾ, ರವಿ, ಗ್ರಾ.ಪಂ. ಸಿಬ್ಬಂದಿ ದಿನೇಶ್, ಪ್ರಸನ್ನ, ಸೌಮ್ಯಾ, ಹೇಮಲತಾ, ರಾಜನಾಯಕ, ಜಯಸ್ವಾಮಿ, ಕುಮಾರ್, ಚಂದ್ರಶೇಖರ, ಜಗದೀಶ್, ಗಣೇಶ್, ರಾಜಮಣಿ, ತಮ್ಮನಾಯಕ, ಕೋಮಲಾಚಾರಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net