

ಪ್ರಮುಖ ಮುಖ್ಯಾಂಶಗಳು
ಎನ್‌ಡಿಪಿಎಸ್ ಕಾಯ್ದೆ ಪ್ರಕರಣಗಳ ಆರೋಪಿಗಳ ವಿರುದ್ಧ ಗಡಿಪಾರು ಆದೇಶ ಜಾರಿ ಮಾಡಲಾಗಿದೆ. ನಗರದಲ್ಲಿ ಮಾದಕ ವಸ್ತುಗಳ ಮಾರಾಟ, ಸಾಗಣೆ, ಸಂಗ್ರಹ ನಿಯಂತ್ರಣ ಸಂಬಂಧ 2025-26ನೇ ಸಾಲಿನಲ್ಲಿ 16 ಆರೋಪಿಗಳ ವಿರುದ್ಧ ಗಡಿಪಾರು ಆದೇಶ ಮಾಡಲಾಗಿದೆ. ನಗರದಲ್ಲಿ ರೌಡಿ ಚಟುವಟಿಕೆಗಳನ್ನು ನಿಯಂತ್ರಣದಲ್ಲಿಡುವ ಸಂಬಂಧ ವಿದ್ಯಾರಣ್ಯಪುರಂ ಠಾಣಾ ವ್ಯಾಪ್ತಿಯ ರೌಡಿ ಪಿ. ಗಣೇಶ ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧನದ ಆಜ್ಞೆ ಹೊರಡಿಸಲಾಗಿದೆ.