ಅನುದಾನ ಸಮರ್ಪಕ ಬಳಕೆಗೆ ಮೈಸೂರು ಡಿಸಿ ಲಕ್ಷ್ಮೀಕಾಂತ್ ರೆಡ್ಡಿ ನಿರ್ದೇಶನ

 ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಮುಖ್ಯಮಂತ್ರಿಗಳ ಮೂಲಸೌಕರ್ಯಗಳ ಅಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು.
ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಮುಖ್ಯಮಂತ್ರಿಗಳ ಮೂಲಸೌಕರ್ಯಗಳ ಅಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು.
Published on
ಮೈಸೂರು: ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಯೋಜನೆಯ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಶೇ.80 ರಷ್ಟು ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿ ಚುರುಕುಗೊಳಿಸಲು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಹೇಳಿದರು.
ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮುಖ್ಯಮಂತ್ರಿಗಳ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಬಳಸಿ ಕಾಮಗಾರಿಗಳನ್ನು ಪೂರ್ಣಗೊಳಿಸದಿದ್ದಲ್ಲಿ ಹೊಸದಾಗಿ ಅನುದಾನ ನೀಡುವುದಿಲ್ಲ ಎಂದರು.
ನಗರ ಪಾಲಿಕೆ ವ್ಯಾಪ್ತಿಯ ಕೃಷ್ಣರಾಜ ವಿಧಾನಸಭಾ ಕ್ಷೇತ್ರದಲ್ಲಿ 18.75 ಕೋಟಿ ರೂ, ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ36.05 ಕೋಟಿ ರೂ ಹಾಗೂ ನರಸಿಂಹ ರಾಜ ವಿಧಾನಸಭಾ ಕ್ಷೇತ್ರದ 35 ಕೋಟಿ ರೂ ವೆಚ್ಚದ ಕಾಮಗಾರಿಗಳನ್ನು ಈ ಯೋಜನೆಯಡಿ ಕೈಗೊಳ್ಳುತ್ತಿದ್ದು, ಬಾಕಿ ಇರುವ 7 ಪ್ಯಾಕೇಜ್‌ಗಳ ಆಡಳಿತಾತ್ಮಕ ಅನುಮೋದನೆ ಪಡೆದು ಕಾಮಗಾರಿ ಪ್ರಾರಂಭಿಸುವಂತೆ ತಿಳಿಸಿದರು.
ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಭಾಗದವರಿಗೆ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮುಜರಾಯಿಗೆ ಸಂಬಂಧಿಸಿದ ಒಟ್ಟು 3 ಕೋಟಿ ರೂ ವೆಚ್ಚದ ವಿವಿಧ 46 ಕಾಮಗಾರಿಗಳಿದ್ದು, 14 ಕೆಲಸ ಪ್ರಗತಿಯಲ್ಲಿದ್ದು, 32 ಕೆಲಸಗಳು ಅಗ್ರಿಮೆಂಟ್ ಮಾಡಿಕೊಳ್ಳಬೇ ಕಿದ್ದು ಶೀಘ್ರವಾಗಿ ಪ್ರಾರಂಭಿಸುವಂತೆ ತಿಳಿಸಿದರು.
ಕೆ.ಆರ್.ಐ.ಡಿ.ಎಲ್ ಹಾಗೂ ನಿರ್ಮಿತಿ ಕೇಂದ್ರದವರಿಗೆ ನೀಡಲಾಗಿರುವ ಕೆಲಸಗಳನ್ನು 15 ದಿನದೊಳಗೆ ಆಡಳಿತಾತ್ಮಕ ಅನುಮೋದನೆ ಪಡೆದು ಕೆಲಸಗಳನ್ನು ಪ್ರಾರಂಭಿಸಬೇಕು. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಮುಜರಾಯಿ ಸೇರಿದಂತೆ ಕಾಮಗಾರಿಗೆ ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆ ನಡೆಸಿ ತೊಂದರೆ ಇದ್ದಲ್ಲಿ ಬಗೆಹರಿಸಿಕೊಂಡು ಕಾಮಗಾರಿಗಳು ಪ್ರಾರಂಭಿಸಿ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ನಗರ ಪಾಲಿಕೆ ಅಧೀಕ್ಷಕ ಇಂಜಿನಿಯರ್ ಮಂಜು ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net