ಪ್ರಸಕ್ತ ಜನಗಣತಿಯಲ್ಲಿ ದತ್ತಾಂಶ ಸಂಗ್ರಹಣೆಯ ಗುಣಮಟ್ಟ ಹೆಚ್ಚಿಸಲು ಮತ್ತು ಶೀಘ್ರದಲ್ಲೇ ಗಣತಿಯ ಮಾಹಿತಿ ಬಿಡುಗಡೆ ಮಾಡಲು ಮೊಬೈಲ್ ಅಪ್ಲಿಕೇಷನ್‌ಗಳು ಹಾಗೂ ಪೋರ್ಟಲ್‌ಗಳಂತಹ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ಜನರ ಆರ್ಥಿಕ ಚಟುವಟಿಕೆ, ಶಿಕ್ಷಣ, ವಸತಿ, ಗೃಹ ಸೌಲಭ್ಯಗಳು, ನಗರೀಕರಣ, ಫಲವತ್ತತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ಭಾಷೆ, ಧರ್ಮ, ವಸಲೆ, ಅಂಗವೈಕಲ್ಯ, ಇತರ ಹಲವು ಸಾಮಾಜಿಕ, ಸಾಂಸ್ಕೃತಿಕ ಮತ್ತು ಜನಸಂಖ್ಯಾ ದತ್ತಾಂಶ ಬಗ್ಗೆ ಮಾಹಿತಿ ಸಂಗ್ರಹಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು, ನಗರಪಾಲಿಕೆ ಉಪ ಆಯುಕ್ತ ಹಾಗೂ ಮೈಸೂರು ನಗರ ಜನಗಣತಿ ಅಧಿಕಾರಿ ಜಿ.ಎಸ್. ಸೋಮಶೇಖರ್ ಇದ್ದರು.