ಬಜೆಟ್‌ನಲ್ಲಿ ಹೆಚ್ಚು ಅನುದಾನ ನೀಡಲು ಆಗ್ರಹಿಸಿ ಮೈಸೂರು ಕನ್ನಡ ವೇದಿಕೆ ಪ್ರತಿಭಟನೆ

ಮೈಸೂರು ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ ನೀಡುವಂತೆ ಒತ್ತಾಯಿಸಿ ಮೈಸೂರು ಕನ್ನಡ ವೇದಿಕೆಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಎಸ್.ಬಾಲಕೃಷ್ಣ, ಮುಖಂಡರಾದ ನಾಲಾ ಬೀದಿರವಿ, ಬೋಗಾದಿ ಸಿದ್ದೇಗೌಡ, ಗುರುಬಸಪ್ಪ, ಪ್ಯಾಲೆಸ್ ಬಾಬು, ಚಾಮರಾಜು ಮಂಡಕಳ್ಳಿ, ಹರೀಶ್, ಚಿನ್ನಪ್ಪ, ಶಿವುಗೌಡ ಇತರರು ಇದ್ದರು.
ಮೈಸೂರು ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ ನೀಡುವಂತೆ ಒತ್ತಾಯಿಸಿ ಮೈಸೂರು ಕನ್ನಡ ವೇದಿಕೆಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಎಸ್.ಬಾಲಕೃಷ್ಣ, ಮುಖಂಡರಾದ ನಾಲಾ ಬೀದಿರವಿ, ಬೋಗಾದಿ ಸಿದ್ದೇಗೌಡ, ಗುರುಬಸಪ್ಪ, ಪ್ಯಾಲೆಸ್ ಬಾಬು, ಚಾಮರಾಜು ಮಂಡಕಳ್ಳಿ, ಹರೀಶ್, ಚಿನ್ನಪ್ಪ, ಶಿವುಗೌಡ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿದ್ಯಾವಂತರು ಉದ್ಯೋಗಕ್ಕಾಗಿ ಬೀದಿಗಿಳಿದು ಪ್ರತಿಭಟನೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ
  • ಜ್ವಲಂತ ಸಮಸ್ಯೆಗಳಿದ್ದರೂ ಅವುಗಳನ್ನು ಬಗೆಹರಿಸುವ ಬದಲು ಶಾಸಕರು ವಿದೇಶ ಪ್ರವಾಸ ಹೋಗಿರುವುದು ನಾಚಿಕೆಗೇಡಿನ ಸಂಗತಿ
ಮೈಸೂರು:ಬಜೆಟ್‌ನಲ್ಲಿ ಮೈಸೂರಿನ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಬೇಕು ಎಂದು ಒತ್ತಾಯಿಸಿ ಮೈಸೂರು ಕನ್ನಡ ವೇದಿಕೆಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿ ಕುರ್ಚಿಗಾಗಿ ಕಚ್ಚಾಟ, ಗುಂಪುಗಾರಿಕೆ ನಡೆಯುತ್ತಿದ್ದು, ಅಭಿವೃದ್ಧಿ ಮರೆತಿದೆ ಎಂದು ದೂರಿದರು.
ಪದೇಪದೆ ಹೈಕಮಾಂಡ್ ಭೇಟಿಗೆ ದೆಹಲಿ ಪ್ರಯಾಣ, ಜಾತಿ ಜಾತಿಗಳ ನಡುವೆ ಸಂಘರ್ಷ, ನಿಗಮ ಮಂಡಳಿಗಳಲ್ಲಿ ಭ್ರಷ್ಟಾಚಾರ, ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಖಜಾನೆ ಖಾಲಿಯಾಗಿದೆ. ಇದರಿಂದ ರಾಜ್ಯದ ವಿವಿಧ ಇಲಾಖೆಗಳಲ್ಲಿ ವೇತನ ನೀಡಲೂ ಹಣವಿಲ್ಲ. ಅಲ್ಲದೆ ವಿದ್ಯಾವಂತರು ಉದ್ಯೋಗಕ್ಕಾಗಿ ಬೀದಿಗಿಳಿದು ಪ್ರತಿಭಟನೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿ ಕಾರಿದರು.
ಜ್ವಲಂತ ಸಮಸ್ಯೆಗಳಿದ್ದರೂ ಅವುಗಳನ್ನು ಬಗೆಹರಿಸುವ ಬದಲು ಶಾಸಕರು ವಿದೇಶ ಪ್ರವಾಸ ಹೋಗಿರುವುದು ನಾಚಿಕೆಗೇಡಿನ ಸಂಗತಿ. ಬಜೆಟ್‌ನಲ್ಲಿ ಮೈಸೂರಿಗೆ ಅತ್ಯಂತ ಅವಶ್ಯವಾಗಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ನೀಡಬೇಕು. ರೇಷ್ಮೆ ಕೃಷಿ ಅಭಿವೃದ್ಧಿಗೆ ಆದ್ಯತೆ ನೀಡಿ, ಇಮ್ಮಾವಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಚಾಲನೆ ನೀಡಬೇಕು. ಬದನವಾಳು ಖಾದಿ ಗ್ರಾಮ, ನಂಜನಗೂಡಿನ ರಸ ಬಾಳೆಗೆ ಹೆಚ್ಚು ಉತ್ತೇಜನ ನೀಡಬೇಕು. ಮಾನವ ವನ್ಯ ಜೀವಿಗಳ ಸಂಘರ್ಷ ತಡೆದು, ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಬೃಹತ್ ಮಹಾನಗರಿ ಪಾಲಿಕೆಯಾಗುತ್ತಿರುವ ಮೈಸೂರಿನ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಬೇಕೆಂದು ಒತ್ತಾಯಿಸಿದರು.
ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ, ಮುಖಂಡರಾದ ನಾಲಾ ಬೀದಿರವಿ, ಬೋಗಾದಿ ಸಿದ್ದೇಗೌಡ, ಗುರುಬಸಪ್ಪ, ಪ್ಯಾಲೆಸ್ ಬಾಬು, ಚಾಮರಾಜು ಮಂಡಕಳ್ಳಿ, ಹರೀಶ್, ಚಿನ್ನಪ್ಪ, ಶಿವುಗೌಡ, ಮಾದಪ್ಪ, ಸುನೀಲ್, ಗೋಪಿ, ಸ್ವಾಮಿ ಗೈಡ್, ಚೆಲುವರಾಯಸ್ವಾಮಿ, ಬೀಡಾ ಬಾಬು, ರಮೇಶ್, ಗೋವಿಂದರಾಜು, ಎಲ್‌ಐಸಿ ಸಿದ್ದಪ್ಪ, ಸುನಿಲ್, ಹನಕೆರೆ ಸ್ವಾಮಿ, ರೈತ ಪರ್ವ ಅಧ್ಯಕ್ಷ ಅರುಣ್ ಕುಮಾರ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net