ಮೈಸೂರು: ‘ವಚನಗಳಲ್ಲಿ ವ್ಯಸನಮುಕ್ತ ಜೀವನ’ ಕುರಿತು ಉಪನ್ಯಾಸ
ಮೈಸೂರಿನ ಸರಸ್ವತಿಪುರಂನ ಬಸವಮಾರ್ಗ ವ್ಯಸನಮುಕ್ತ ಮತ್ತು ಪುನರ್ವಸತಿ ಕೇಂದ್ರದಲ್ಲಿ ಮಂಗಳವಾರ ‘ವಚನಗಳಲ್ಲಿ ವ್ಯಸನಮುಕ್ತ ಜೀವನ’ ಕುರಿತು ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಉದ್ಘಾಟಿಸಿದರು. ಡಾ.ಎಂ.ದೇವಿಕಾ, ಡಾ.ಹೆಳವರಹುಂಡಿ ಸಿದ್ದಪ್ಪ, ಎಂ.ಚಂದ್ರಶೇಖರ್, ಎಸ್.ಬಸವರಾಜು, ದೇವರಾಜು ಪಿ.ಚಿಕ್ಕಹಳ್ಳಿ ಹಾಗೂ ಇತರರು ಇದ್ದರು.
Published on:
Copied
Follow Us
ಮೈಸೂರು: ನಗರದ ಸರಸ್ವತಿಪುರಂನ ಬಸವಮಾರ್ಗ ವ್ಯಸನಮುಕ್ತ ಮತ್ತು ಪುನರ್ವಸತಿ ಕೇಂದ್ರದಲ್ಲಿ ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕ, ಬಸವಮಾರ್ಗ ಫೌಂಡೇಷನ್ ವತಿಯಿಂದ ಮಂಗಳವಾರ ‘ವಚನಗಳಲ್ಲಿ ವ್ಯಸನಮುಕ್ತ ಜೀವನ’ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬಸವಣ್ಣ ಈ ನಾಡಿನಲ್ಲಿ ಜನ್ಮ ಪಡೆಯದಿದ್ದರೆ ಸಮಾಜದಲ್ಲಿ ಅಸಮಾನತೆ ಮತ್ತಷ್ಟು ಹೆಚ್ಚಾಗುತಿತ್ತು. ಸಮ ಸಮಾಜದ ಪರಿಕಲ್ಪನೆ ಹುಟ್ಟಿದ್ದೆ ವಚನ ಸಾಹಿತ್ಯ ಹುಟ್ಟಿದ ಮೇಲೆ. ಬಸವಾದಿ ಶರಣರ ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ವ್ಯಸನಕ್ಕೆ ದಾಸರಾದಕೂಡಲೆ ಜೀವನ ಮುಗಿದು ಹೋಯಿತು ಎನ್ನುವ ಕಲ್ಪನೆ ಬೇಡ. ಮುಂದೆಯೂ ಕೂಡ ನಿಮಗೆ ಜೀವನ ಇದೆ. ನಮ್ಮನ್ನು ನಾವು ಅರಿತುಕೊಂಡರೆ ಬದುಕು ಸಾರ್ಥಕವಾಗುತ್ತದೆ. ಪ್ರತಿಯೊಬ್ಬರು ಕೂಡ ವಚನಗಳನ್ನು ಓದಬೇಕು. ಓದುವ ಹವ್ಯಾಸ ಬೆಳಸಿಕೊಳ್ಳಬೇಕು. ಇದರಿಂದ ಉತ್ತಮ ದಾರಿಯನ್ನು ಕಂಡುಕೊಳ್ಳಲು ಸಾಧ್ಯ. ಬದಲಾವಣೆಯ ಛಲವನ್ನು ಬೆಳಸಿಕೊಂಡು ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಬಸವಮಾರ್ಗ ಫೌಂಡೇಷನ್ ಸ್ಥಾಪಕ ಅಧ್ಯಕ್ಷ ಎಸ್. ಬಸವರಾಜು ಮಾತನಾಡಿ, ವ್ಯಸನಕ್ಕೆ ದಾಸರಾದವರು ಎಲ್ಲರಿಂದಲೂ ದೂರಾಗುತ್ತಾರೆ. ವ್ಯಸನಕ್ಕೆ ದಾಸರಾದವರಿಗೆ ಕರುಣೆ, ಪ್ರೀತಿ ಕೊಟ್ಟರೆ ಒಳ್ಳೆಯ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
‘ವಚನಗಳಲ್ಲಿ ವ್ಯಸನಮುಕ್ತ ಜೀವನ’ ವಿಷಯದ ಶಾರದ ವಿಲಾಸ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ಎಂ.ದೇವಿಕಾ ಮಾತನಾಡಿದರು. ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಹೆಳವರಹುಂಡಿ ಸಿದ್ದಪ್ಪ, ಮಾಜಿ ಜಿಲ್ಲಾಧ್ಯಕ್ಷ ಎಂ.ಚಂದ್ರಶೇಖರ್, ತಾಲೂಕು ಅಧ್ಯಕ್ಷ ದೇವರಾಜು ಪಿ.ಚಿಕ್ಕಹಳ್ಳಿ ಹಾಗೂ ಇತರರು ಇದ್ದರು.