ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ಗೆ ಮೈಸೂರು ತಂಡ ಆಯ್ಕೆ

 ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌
ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌
Published on

ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ಗೆ ಭಾನುವಾರ ಮೈಸೂರು ಜಿಲ್ಲಾ ತಂಡವನ್ನು ಆಯ್ಕೆ ಮಾಡಲಾಯಿತು.

ಮೈಸೂರು ಜಿಲ್ಲಾ ಅಥ್ಲೆಟಿಕ್ಸ್ ಸಂಘದ ವತಿಯಿಂದ ನಗರದ ನಜರ್‌ಬಾದ್‌ನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯ್ಕೆ ಟ್ರಯಲ್ಸ್ ನಡೆಯಿತು.
ಜಿಲ್ಲೆಯ ವಿವಿಧ ತಾಲೂಕುಗಳು ಹಾಗೂ ತರಬೇತಿ ಕೇಂದ್ರಗಳಿಂದ ಆಗಮಿಸಿದ್ದ ಸುಮಾರು 380 ಅಥ್ಲೀಟ್‌ಗಳು ಟ್ರಯಲ್ಸ್‌ನಲ್ಲಿ ಭಾಗವಹಿಸಿದ್ದರು.
14, 16, 18 ಹಾಗೂ 20 ವರ್ಷದ ಬಾಲಕ-ಬಾಲಕಿಯರ ವಿಭಾಗಗಳಲ್ಲಿ ಓಟ, ಜಿಗಿತ ಮತ್ತು ಗುಂಡು ಎಸೆತ ಸೇರಿದಂತೆ ಸುಮಾರು 80 ಸ್ಪರ್ಧೆಗಳ ಆಧಾರದ ಮೇಲೆ ಅಥ್ಲೀಟ್‌ಗಳ ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡಿ ರಾಜ್ಯ ಚಾಂಪಿಯನ್‌ಷಿಪ್‌ಗೆ ಮೈಸೂರು ಜಿಲ್ಲಾ ತಂಡವನ್ನು ಆಯ್ಕೆ ಮಾಡಲಾಯಿತು.
ಅಥ್ಲೀಟ್‌ಗಳ ತಾಂತ್ರಿಕ ಸಾಮರ್ಥ್ಯ, ಪ್ರದರ್ಶನ ಹಾಗೂ ಅರ್ಹತೆಯನ್ನು ಪರಿಗಣಿಸಿ ಅಂತಿಮ ತಂಡವನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಆಯ್ಕೆಯಾದ ಅಥ್ಲೀಟ್‌ಗಳು ಮುಂಬರುವ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಮೈಸೂರು ಜಿಲ್ಲೆಯನ್ನು ಪ್ರತಿನಿಧಿಸಲಿದ್ದು, ಉತ್ತಮ ಸಾಧನೆ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಲಿದ್ದಾರೆ ಎಂಬ ವಿಶ್ವಾಸವನ್ನು ಸಂಘದ ಪದಾಧಿಕಾರಿಗಳು ವ್ಯಕ್ತಪಡಿಸಿದರು.
ಜಿಲ್ಲಾ ಅಥ್ಲೆಟಿಕ್ಸ್ ಸಂಘದ ಅಧ್ಯಕ್ಷ ಸೋಮಶೇಖರ್, ಕಾರ್ಯದರ್ಶಿ ಶ್ರೀಕಾಂತ್, ಉಮೇಶ್, ಪರಮಶಿವಮೂರ್ತಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net