2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 11 ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್, 2 ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ 1 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಕಾಂಗ್ರೆಸ್‌ನ ಡಾ.ಎಚ್.ಸಿ. ಮಹದೇವಪ್ಪ, ಕೆ. ವೆಂಕಟೇಶ್ ಹಾಗೂ ತನ್ವೀರ್ ಸೇಠ್ ತಲಾ 6 ಬಾರಿ ಗೆಲುವು ಸಾಧಿಸಿದ್ದಾರೆ. ಎಚ್.ಡಿ. ಕೋಟೆ ಕ್ಷೇತ್ರದ ಅನಿಲ್ ಚಿಕ್ಕಮಾದು 2 ಬಾರಿ ಗೆಲುವು ಸಾಧಿಸಿದ್ದಾರೆ. ಚಾಮರಾಜದ ಕೆ. ಹರೀಶ್ ಗೌಡ, ನಂಜನಗೂಡಿನ ದರ್ಶನ್ ಧ್ರುವನಾರಾಯಣ, ಕೆ.ಆರ್.ನಗರದ ಡಿ. ರವಿಶಂಕರ್ ಪ್ರಥಮ ಬಾರಿಗೆ ಗೆಲುವು ಸಾಧಿಸಿ ವಿಧಾನಸಭೆ ಪ್ರವೇಶಿಸಿದ್ದಾರೆ.