ಮೈಸೂರು ವಿವಿ ಯಾವುದೇ ಕೋರ್ಸ್‌ಗಳ ಸ್ಥಗಿತ ಇಲ್ಲ : ಕುಲಪತಿ ಪ್ರೊ.ಎನ್.ಕೆ. ಲೋಕನಾಥ್

ಕುಲಪತಿ ಪ್ರೊ.ಎನ್.ಕೆ. ಲೋಕನಾಥ್
ಕುಲಪತಿ ಪ್ರೊ.ಎನ್.ಕೆ. ಲೋಕನಾಥ್
Published on
ಮೈಸೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಕೆಲವೊಂದು ಕೋರ್ಸ್‌ಗಳಿಗೆ ವಿದ್ಯಾರ್ಥಿಗಳ ಕೊರತೆ ಇದೆ. ಆದರೆ, ಯಾವುದೇ ಕೋರ್ಸ್‌ಗಳನ್ನು ಸ್ಥಗಿತಗೊಳಿಸಿಲ್ಲ ಎಂದು ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಸ್ಪಷ್ಟನೆ ನೀಡಿದರು.
ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ ಭವನದ ಶಿಕ್ಷಣ ಮಂಡಳಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಶಿಕ್ಷಣ ಮಂಡಳಿ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ವಿವಿಯ ಹಲವು ಕೋರ್ಸ್‌ಗಳ ಸೀಟುಗಳು ಸಂಪೂರ್ಣ ಭರ್ತಿಯಾಗುತ್ತಿವೆ. ಆದರೆ, ಕೆಲವು ಕೋರ್ಸ್‌ಗಳಿಗೆ ಪ್ರತಿ ವರ್ಷ ವಿದ್ಯಾರ್ಥಿಗಳ ಕೊರತೆ ಕಂಡು ಬರುತ್ತಿದೆ. ಅಂತಹ ಕೋರ್ಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಸಂಖ್ಯೆ ಹೆಚ್ಚಿಸಲು ವಿಭಾಗದ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆಯೇ ಹೊರತು ಕೋರ್ಸ್‌ಗಳನ್ನು ಮುಚ್ಚುವ ಪ್ರಸ್ತಾವನೆ ಇಲ್ಲ. ಕೋರ್ಸ್‌ಗಳನ್ನು ಮುಚ್ಚಲಾಗುತ್ತದೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು. 5 ವಿದ್ಯಾರ್ಥಿಗಳು ಇರುವ ಕೋರ್ಸ್‌ಗಳನ್ನು ಸಹ ಮುಂದುವರೆಸಿದ್ದೇವೆ ಎಂದರು.
ವಿದ್ಯಾರ್ಥಿಗಳನ್ನು ವಿವಿಯ ಕಡೆಗೆ ಆಕರ್ಷಿಸಲು ಓಪನ್ ಡೇ ಕಾರ್ಯಕ್ರಮ ಆಯೋಜಿಸುವ ಕುರಿತು ಸಭೆಯಲ್ಲಿ ಸಲಹೆ ವ್ಯಕ್ತವಾಯಿತು. ಓಪನ್ ಡೇ ಆಯೋಜಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಪ್ರೊ.ಎನ್.ಕೆ. ಲೋಕನಾಥ್ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net