ರಾಜಕೀಯ ಪ್ರೇರಿತವಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಕೂಡಲೇ ಎಫ್‌ಐಆರ್ ರದ್ದು ಪಡಿಸಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು. ಆರ್‌ಎಸ್‌ಎಸ್ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿದ ಅವರು, ನಂತರ ಆರ್‌ಎಸ್‌ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು.