ಸಂಸ್ಥೆಯ ಅಧ್ಯಕ್ಷ. ಕೆ.ಬಿ.ಲಿಂಗರಾಜು ಮಾತನಾಡಿ, ಓಂಕಾರಪ್ಪ 1997-1998 ಸಾಲಿನಲ್ಲಿ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅವರ ಅವಧಿಯಲ್ಲಿ ಸಂಸ್ಥೆಯನ್ನು ಉನ್ನತ ಸ್ಥಾನಕ್ಕೆ ಏರಿಸಿದರು. ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಎರಡು ಬಾರಿ ಆಯ್ಕೆಯಾಗಿದ್ದರು. ಮೈಸೂರು ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್, ಮೈಸೂರು ಗ್ರೇನ್ ಮರ್ಚೆಂಟ್ಸ್ ಅಸೋಸಿಯೇಷನ್, ತರಳಬಾಳು ಸಮಾಗಮ ಸಂಸ್ಥೆಗಳಿಗೆ ಅಧ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು ಎಂದು ಸ್ಮರಿಸಿದರು.