ಪ್ರೊ.ರಹಮತ್ ತರೀಕೆರೆಗೆ ಮಲೆಯೂರು ಗುರುಸ್ವಾಮಿ ಪ್ರಶಸ್ತಿ

Award
Award
Published on
ಮೈಸೂರು: ಪ್ರೊ.ಮಲೆಯೂರು ಗುರುಸ್ವಾಮಿ ಪ್ರಶಸ್ತಿಗೆ ವಿದ್ವಾಂಸ, ವಿಮರ್ಶಕ ಪ್ರೊ.ರಹಮತ್ ತರೀಕೆರೆ ಭಾಜನರಾಗಿದ್ದಾರೆ.
ಪ್ರೊ.ಮಲೆಯೂರು ಗುರುಸ್ವಾಮಿ ಪ್ರತಿಷ್ಠಾನವು ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಪ್ರಶಸ್ತಿಯು ಫಲ-ತಾಂಬೂಲ ಪ್ರಶಸ್ತಿ ಪತ್ರದೊಂದಿಗೆ 25 ಸಾವಿರ ರೂ. ನಗದು ಒಳಗೊಂಡಿದೆ. ನ.9ರಂದು ಅಗ್ರಹಾರದ ಶ್ರೀ ರಾಜೇಂದ್ರ ಭವನದಲ್ಲಿ ನಡೆಯಲಿರುವ ಪ್ರೊ.ಮಲೆಯೂರು ಗುರುಸ್ವಾಮಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಾನಪದ ವಿದ್ವಾಂಸ ಪ್ರೊ.ಪಿ.ಕೆ.ರಾಜಶೇಖರ, ಸಂಸ್ಕೃತಿ ಚಿಂತಕ ಶಂಕರ ದೇವನೂರು, ಪ್ರತಿಷ್ಠಾನದ ಗೌರವಾಧ್ಯಕ್ಷೆ ಕೆ.ಎಸ್.ಜಯಂತಿ  ಭಾಗವಹಿಸಲಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net