ಸಿಎಂ ಸ್ಥಾನಕ್ಕೆ ಪರಮೇಶ್ವರ್ ಹೆಸರು ಯಾಕೆ ಕೇಳಿಬರಲ್ಲ?

Demand for CM post for G.Parameshwar
Demand for CM post for G.Parameshwar
Published on
ಮೈಸೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯ ಚರ್ಚೆಗೆ ಬಂದಾಗಲೆಲ್ಲ ಹಲವರ ಹೆಸರು ಕೇಳಿ ಬರುತ್ತದೆ. ಆದರೆ ಕಾಂಗ್ರೆಸ್ ಸಂಘಟನೆಗೆ, ಪಕ್ಷಕ್ಕೆ ಮಹತ್ತರ ಕೊಡುಗೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೆಸರು ಏಕೆ ಕೇಳಿ ಬರುವುದಿಲ್ಲ ಎಂದು ಡಾ.ಜಿ.ಪರಮೇಶ್ವರ್ ಅಭಿಮಾನಿ ಬಳಗದ ಅಧ್ಯಕ್ಷ ಬಿಳಿಕೆರೆ ರಾಜು ಪ್ರಶ್ನಿಸಿದರು.
ಚುನಾವಣೆ ವೇಳೆ ದಲಿತರಿಗೆ ಸಿಎಂ ಸ್ಥಾನ ನೀಡುವುದಾಗಿ ತಿಳಿಸಿದರೂ ನಂತರ ಕಡೆಗಣನೆ ಮಾಡುತ್ತಾರೆ. ಈ ಸಮುದಾಯದಲ್ಲಿ ಮತದಾರರಿಲ್ಲವೇ? ಡಾ.ಜಿ.ಪರಮೇಶ್ವರ್ ಅವರು ತಮಗೆ ಅನ್ಯಾಯವಾದಾಗಲೂ ಧ್ವನಿಯೆತ್ತದೆ ಮೌನವಾಗಿರುತ್ತಾರೆ. ಆದರೂ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಅನಿವಾರ್ಯವಾದಲ್ಲಿ ಇವರಿಗೆ ಸಿಎಂ ಸ್ಥಾನ ನೀಡಬೇಕೆಂದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಕಾಂಗ್ರೆಸ್ ಅಧ್ಯಕ್ಷರಾಗಿ, ಹಲವಾರು ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಈಗಲೂ ನಿಭಾಯಿಸುತ್ತಿದ್ದಾರೆ. ಈ ಹಿಂದೆಯೂ ಇವರಿಗೆ 2 ಬಾರಿ ಅನ್ಯಾಯವಾಗಿದೆ. ಹಿರಿಯ ನಾಯಕರೂ ಆಗಿದ್ದು, ಕಾಂಗ್ರೆಸ್ ಹೈಕಮಾಂಡ್, ರಾಜ್ಯದ ಮುಖಂಡರು ಇತ್ತ ಗಮನ ಹರಿಸಿ, ಇವರಿಗೆ ಸಿಎಂ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕೃಷ್ಣ, ಶಿವರಾಜು, ನಾಗರಾಜ್, ಲೋಕೇಶ್ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net