ಟಿ.ಸತೀಶ್ ಜವರೇಗೌಡಗೆ ಪ್ರಶಸ್ತಿ

T. Satish Javare Gowda
T. Satish Javare Gowda
Published on
ಮೈಸೂರು: ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಟಿ.ಸತೀಶ್ ಜವರೇಗೌಡ ಅವರು ಮಂಡ್ಯದ ಕನ್ನಿಕಶಿಲ್ಪ ನವೋದಯ ಎಜುಕೇಷನ್ ಟ್ರಸ್ಟನಿಂದ ನೀಡಲಾಗುವ ’ಕುವೆಂಪು ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
 ಸದರಿ ಪ್ರಶಸ್ತಿಯು 5 ಸಾವಿರ ರೂ. ನಗದು, ಅಭಿನಂದನಾ ಪತ್ರ ಮತ್ತು ಪ್ರಶಸ್ತಿ ಫಲಕದೊಂದಿಗೆ ಗೌರವ ಸನ್ಮಾನವನ್ನು ಹೊಂದಿದೆ.      ನ.9 ರಂದು ಬೆಳಗ್ಗೆ 10 ಗಂಟೆಗೆ ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಪ್ರದಾನ ಮಾಡಲಾಗುವುದು.  ತುಮಕೂರಿನ ಸಿದ್ಧಗಂಗಾ ಮಠದ ಪೀಠಾಧಿಪತಿ ಶ್ರೀ ಸಿದ್ಧಲಿಂಗ ಸ್ವಾಮೀಜಿ. ಬೆಂಗಳೂರಿನ ಕೆಂಗೇರಿಯ ವಿಶ್ವ ಒಕ್ಕಲಿಗರ ಮಠದ ಪೀಠಾಧಿಪತಿ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಕರ್ನಾಟಕ ಜಾನಪದ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಟಿ.ತಿಮ್ಮೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್.ಆತ್ಮಾನಂದ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಎಚ್.ಬಿ.ರಾಮಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net