ವಿವಿಧ ಸಂಘಗಳಿಗೆ ಮೀನುಮರಿ ವಿತರಣೆ

 ಸೋಮವಾರಪೇಟೆ ತಾಲೂಕಿನ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ವ್ಯಾಪ್ತಿಯ ಕೆರೆಗಳಲ್ಲಿ ಮೀನುಗಾರಿಕೆ ಚಟುವಟಿಕೆ ಕೈಗೊಳ್ಳಲು ಸಂಘಗಳಿಗೆ ಮೀನುಮರಿಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್‌ಕುಮಾರ್ ಮಾತನಾಡಿದರು. ಮಿಲನಾ ಭರತ್ ಇದ್ದರು.

Published on
ಸೋಮವಾರಪೇಟೆ: ತಾಲೂಕಿನ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ವ್ಯಾಪ್ತಿಯ ಕೆರೆಗಳಲ್ಲಿ ಮೀನುಗಾರಿಕೆ ಚಟುವಟಿಕೆ ಕೈಗೊಳ್ಳಲು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಸಂಘಗಳಿಗೆ ಮೀನುಮರಿಗಳನ್ನು ಬುಧವಾರ ವಿತರಿಸಲಾಯಿತು.
ಮೀನುಗಾರಿಕೆ ಇಲಾಖೆ ವತಿಯಿಂದ ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್ ಇಲಾಖೆ ಸಹಯೋಗದೊಂದಿಗೆ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನ ಪಂಚಾಯಿತಿ ಮಟ್ಟದಲ್ಲಿ ಮತ್ಸ್ಯ ಸಂಜೀವಿನಿ ಯೋಜನೆಯಡಿ ಕೆರೆಗಳಲ್ಲಿ ಮೀನುಗಾರಿಕೆ ಚಟುವಟಿಕೆ ಕೈಗೊಳ್ಳಲು ಕಬಿನಿ ಮೀನುಮರಿ ಉತ್ಪಾದನಾ ಕೇಂದ್ರದಿಂದ ಖರೀದಿಸಿ ತಾಲೂಕಿನ ಪಾಲನಾ ಕೇಂದ್ರದಲ್ಲಿ ಪಾಲನೆ ಕೈಗೊಂಡ ಸಾಮಾನ್ಯ ಗೆಂಡೆ ಮೀನುಮರಿಗಳನ್ನು ವಿತರಿಸಲಾಯಿತು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್‌ಕುಮಾರ್ ಮಾತನಾಡಿ, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಯಾವುದೇ ಯೋಜನೆ ಸಂಪೂರ್ಣವಾಗಿ ಯಶಸ್ಸು ಸಾಧಿಸಬೇಕಾದರೆ ಶ್ರಮಪಟ್ಟು ಕೆಲಸ ಮಾಡಬೇಕಾಗುತ್ತದೆ. ಮೀನು ಮರಿಗಳ ಸಾಕಣೆಯಿಂದ ಉತ್ತಮ ಆದಾಯವನ್ನು ನಿರೀಕ್ಷಿಸಬಹುದು ಎಂದರು.
ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೆಶಕರಾದ ಮಿಲನಾ ಭರತ್, ಮೀನು ಕೃಷಿಯಲ್ಲಿ ವಹಿಸಬೇಕಾದ ಎಚ್ಚರಿಕೆಯ ಕ್ರಮಗಳು, ಸಾಕಣೆ ಕುರಿತು ಮಾಹಿತಿ ನೀಡಿದರು.
ಎನ್‌ಆರ್‌ಎಲ್‌ಎಂ ಸಿಬ್ಬಂದಿ, ವಿವಿಧ ಒಕ್ಕೂಟಗಳ ಪ್ರತಿನಿಧಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net