ಅರ್ಜಿ ಆಹ್ವಾನಿಸದೇ ರಾಜ್ಯೋತ್ಸವ ಪ್ರಶಸ್ತಿ

Siddaramayya
Siddaramayya
Published on
 ಮೈಸೂರು: ಈ ಬಾರಿ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ ಎಂದರು.
ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆ ಕಾಯಿಯಂತೆ ಸೇವೆ ಸಲ್ಲಿಸಿರುವ ಹಲವು ಸಾಧಕರನ್ನು ಗುರುತಿಸಿ ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ ಎಂದು ಹೇಳಿದರು. 
ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಶಾಸಕ ಡಿ.ರವಿಶಂಕರ್, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಇದ್ದರು.
ಅಕ್ರಮ ರೆಸಾರ್ಟ್‌ಗಳಿಗೆ ಕಡಿವಾಣ: ಜನರು ಕಾಡಿನೊಳಗೆ ಓಡಾಡುವುದು ಹೆಚ್ಚಾಗಿದೆ. ಪರಿಣಾಮ ಪ್ರಾಣಿಗಳು ಹೊರಬರಲು ಪ್ರಾರಂಭಿಸಿವೆ. ಕಾಡಿನೊಳಗೆ ಪ್ರಾಣಿಗಳಿಗೆ ಮೇವು, ನೀರು ಸಿಗುತ್ತಿಲ್ಲ. ಇದರಿಂದಲೂ ನಾಡಿನತ್ತ ಪ್ರಾಣಿಗಳು ಬರುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಾಡಂಚಿನಲ್ಲಿ ಅಕ್ರಮ ರೆಸಾರ್ಟ್‌ಗಳು ಹೆಚ್ಚಾಗುತ್ತಿವೆ. ಅವುಗಳಿಗೆ ಕಡಿವಾಣ ಹಾಕುವ ಕೆಲಸ ಮಾಡುತ್ತೇವೆ. ಜತೆಗೆ ಅಕ್ರಮವಾಗಿ ರೆಸಾರ್ಟ್‌ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. 
ಸಫಾರಿಗಳ ಸಂಖ್ಯೆಯೂ ಹೆಚ್ಚಾಗಿರುವ ಬಗ್ಗೆ ಗಮನಕ್ಕೆ ಬಂದಿದೆ. ಅದನ್ನು ಕಡಿಮೆ ಮಾಡುವ ಕೆಲಸ ಮಾಡುತ್ತೇವೆ. ಹುಲಿ ದಾಳಿ ಪ್ರಕರಣಕ್ಕೆ ನಾನೇ ಪ್ರತ್ಯೇಕ ಸಭೆ ಕರೆಯುತ್ತಿದ್ದೇನೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net