ಡಿ.ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಡಾ.ಎಚ್.ಸಿ.ಮಹಾದೇವಪ್ಪ, ಶಾ ಶಾಸಕ ತನ್ವಿರ್ ಸೇಠ್, ಭಾರತಿ ಅರಸ್ ಹಾಗೂ ಇತರರು ಇದ್ದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಡಾ.ಎಚ್.ಸಿ.ಮಹಾದೇವಪ್ಪ, ಶಾ ಶಾಸಕ ತನ್ವಿರ್ ಸೇಠ್, ಭಾರತಿ ಅರಸ್ ಹಾಗೂ ಇತರರು ಇದ್ದರು.
Published on
ಮೈಸೂರು: ಸಿದ್ಧಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿ ನೂತನ ಕಚೇರಿ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಪ್ರತಿಮೆಯನ್ನು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.
ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಸಿದ್ದರಾಮಯ್ಯ, ಮೈಸೂರಿನವರಾದ ದೇವರಾಜ ಅರಸು 8 ವರ್ಷಗಳವರೆಗೆ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿದ್ದರು. ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ನಾನು ಜನತಾ ಪರಿವಾರದಲ್ಲಿದ್ದೆ. ದೇವರಾಜ ಅರಸು ಕಾಂಗ್ರೆಸ್‌ನಲ್ಲಿದ್ದರು. ದೇವರಾಜ ಅರಸು ಸಾಮಾಜಿಕ ನ್ಯಾಯ, ಬದ್ಧತೆ ವಿಚಾರದಲ್ಲಿ ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.
ಅಸಮಾನತೆ ಹೋಗಲಾಡಿಸಲು ದೇವರಾಜ ಅರಸು ಶ್ರಮಿಸಿದ್ದರು. ಪ್ರಾತಿನಿಧ್ಯತೆ ಇಲ್ಲದ ಸಣ್ಣ ಸಮುದಾಯಗಳಿಗೆ ಅವಕಾಶ ನೀಡಿದರು. ಇದರಿಂದ ಹಲವು ಸೂಕ್ಷ್ಮ ಸಮುದಾಯದ ಜನ ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಯಿತು. ನೊಂದವರ ಪರ ಇದ್ದ ಡಿ.ದೇವರಾಜ ಅರಸು ಅವರ ಕಾರ್ಯವೈಖರಿ ಇತರ ರಾಜಕಾರಣಿಗಳಿಗೆ ಮಾದರಿಯಾಗಿದೆ. ಸಮಾಜದಲ್ಲಿರುವ ಅಸಮಾನತೆ ಹೋಗಲಾಡಿಸಲು ರಾಜಕಾರಣಿಗಳು ಮುಂದಾಗಬೇಕು. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ನ್ಯಾಯ ಒದಗಿಸಬೇಕು ಎಂದು ಹೇಳಿದರು.
ಎಲ್ಲ ಕ್ಷೇತ್ರಗಳಲ್ಲೂ ಹಿಂದುಳಿದಿರುವ ಸಮುದಾಯಗಳಿಗೆ ದೇವರಾಜ ಅರಸು ನ್ಯಾಯ ಒದಗಿಸುವ ಕೆಲಸ ಮಾಡಿದರು. ದೇವರು ನಮಗೆ ವರವೂ ನೀಡುವುದಿಲ್ಲ, ಶಾಪವೂ ನೀಡುವುದಿಲ್ಲ. ಆದರೆ ಅವಕಾಶ ನೀಡುತ್ತದೆ. ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವುದು ಬುದ್ಧಿವಂತಿಕೆಯ ಲಕ್ಷಣ. ಆ ಕಾರಣದಿಂದಾಗಿಯೇ ದೇವರಾಜ ಅರಸು ಅವರು ಸಣ್ಣಪುಟ್ಟ ಸಮುದಾಯಗಳಿಗೆ ಅವಕಾಶ ಕಲ್ಪಿಸಿಕೊಟ್ಟರು. ಅವಕಾಶ ವಂಚಿತ ಸಮಾಜಗಳಿಗೆ ನ್ಯಾಯ ಒದಗಿಸುವ ಕಾರ್ಯ ಮಾಡಿದ್ದಾರೆ. ಸಮಾಜದಲ್ಲಿರುವ ತಪ್ಪುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಹುಟ್ಟೂರಲ್ಲಿ ಸ್ಮಾರಕ ನಿರ್ಮಿಸಲು ಕ್ರಮಏಕೀಕರಣವಾಗಿದ್ದರೂ ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣ ಮಾಡಿದ್ದು, ಡಿ.ದೇವರಾಜ ಅರಸು. ಕರ್ನಾಟಕ ಎಂದು ನಾಮಕರಣ ಮಾಡಿ 52ವರ್ಷಗಳು ಕಳೆದಿದೆ. 50ನೇ ವರ್ಷದ ಸಂಭ್ರಮಾಚರಣೆಯನ್ನು ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ಮಾಡಬೇಕಾಗಿತ್ತು. ಆದರೆ, ಬಿಜೆಪಿ ಸರ್ಕಾರ ಸಂಭ್ರಮಾಚರಣೆ ಕಾರ್ಯಕ್ರಮ ಮಾಡಿರಲಿಲ್ಲ. ಇದರಿಂದ ನಮ್ಮ ಸರ್ಕಾರ ಕಳೆದ ವರ್ಷ ರಾಜ್ಯಾದ್ಯಂತ ರಥಯಾತ್ರೆ ನಡೆಸಿದ ಬಳಿಕ ವಿಧಾನಸೌಧದ ಮುಂದೆ ಭುವನೇಶ್ವರಿ ಪ್ರತಿಮೆಯನ್ನು ಅನಾವರಣ ಮಾಡಿದೆ. ದೇವರಾಜ ಅರಸು ಅವರ ಹುಟ್ಟೂರಾದ ಕಲ್ಲಹಳ್ಳಿಯಲ್ಲಿ ದೇವರಾಜ ಅರಸು ಅವರ ಸ್ಮಾರಕ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. 
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ಶಾಸಕರಾದ  ಡಿ.ರವಿಶಂಕರ್, ಸಿ.ಪುಟ್ಟರಂಗಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಅಡಗೂರು ಎಚ್.ವಿಶ್ವನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಡಾ.ಯತಿಂದ್ರ ಸಿದ್ದರಾಮಯ್ಯ, ಕೆ.ಶಿವಕುಮಾರ್, ದೇವರಾಜ ಅರಸು ಪುತ್ರಿ ಭಾರತಿ ಅರಸ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್  ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net