ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಮೂವರ ಸಾವು

 ಶಿವಮೂರ್ತಿ
ಶಿವಮೂರ್ತಿ
Published on
ನಂಜನಗೂಡು: ನಗರದ ರೈಲ್ವೆ ಮೇಲ್ಸೇತುವೆ ಬಳಿ ಇರುವ ಚಾಮುಂಡಿ ಟೌನ್‌ಶಿಪ್ ಬಳಿ ಭಾನುವಾರ ದ್ವಿಚಕ್ರ ವಾಹನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
 ಚಾಮರಾಜನಗರ ತಾಲೂಕಿನ ಉದ್ದನೂರು ಗ್ರಾಮದ ನಿವಾಸಿ ಶಿವಮೂರ್ತಿ (52), ಅವರ ಪತ್ನಿ ಚೆನ್ನಾಜಮ್ಮ (46) ಹಾಗೂ ಪುತ್ರ ಸಿದ್ಧಾರ್ಥ (15) ಮೃತರು.
ಕಾರ್ಯನಿಮಿತ್ತ ಮೈಸೂರಿಗೆ ತೆರಳಿದ್ದ ಕುಟುಂಬದವರು ವಾಪಸ್ ಊರಿಗೆ ತೆರಳುತ್ತಿದ್ದ ವೇಳೆ ನಂಜನಗೂಡು ನಗರದ ಪ್ರವೇಶ ದ್ವಾರದ ಬಳಿ ಇರುವ ಚಾಮುಂಡಿ ಟೌನ್‌ಶಿಪ್ ಮುಂಭಾಗದಲ್ಲಿ ಬೈಕ್‌ನಲ್ಲಿ ಚಲಿಸುತ್ತಿದ್ದ ವೇಳೆ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಸ್ಥಳದಲ್ಲೇ ಸಿದ್ಧಾರ್ಥ ಮೃತಪಟ್ಟರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಶಿವಮೂರ್ತಿ ಕೊನೆಯುಸಿರೆಳೆದರು. ಗಂಭೀರವಾಗಿ ಗಾಯಗೊಂಡಿದ್ದ ಚೆನ್ನಾಜಮ್ಮ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.
ಈ ಸಂಬಂಧ ನಂಜನಗೂಡು ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತಕ್ಕೀಡಾಗಿರುವ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net