ರಾಷ್ಟ್ರಕವಿ ಕುವೆಂಪು ಜಯಂತಿ, ಪ್ರತಿಭಾ ಪುರಸ್ಕಾರ

ಕುವೆಂಪು
ಕುವೆಂಪು
Published on
ಕೆ.ಆರ್.ನಗರ: ಒಕ್ಕಲಿಗ ನೌಕರರ ಸ್ನೇಹ ಬಳಗದ ವತಿಯಿಂದ ರಾಷ್ಟ್ರಕವಿ ಕುವೆಂಪು ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯವನ್ನು ಜ.4ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಪಿ.ಎಲ್.ಡಿ. ಬ್ಯಾಂಕ್ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.
ಕೆ.ಆರ್.ನಗರ ಮತ್ತು ಸಾಲಿಗ್ರಾಮ ಒಕ್ಕಲಿಗ ಸಮುದಾಯದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 80 ವಿದ್ಯಾರ್ಥಿಗಳಿಗೆ ಹಾಗೂ 40 ಮಂದಿ ನಿವೃತ್ತ ನೌಕರರಿಗೆ ಅಭಿನಂದಿಸಲಾಗುತ್ತದೆ. ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಸಚಿವ ಸಾ.ರಾ.ಮಹೇಶ್ ವಹಿಸಲಿದ್ದಾರೆ. ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಿವೃತ್ತ ನೌಕರನ್ನು ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ ಸನ್ಮಾನಿಸಲಿದ್ದಾರೆ. ಪ್ರತಿಭಾ ಪುರಸ್ಕಾರವನ್ನು ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ನೀಡಲಿದ್ದಾರೆ.
ಕುವೆಂಪು ವಿಚಾರಧಾರೆ ಕುರಿತು ಉಪ ಪ್ರಾಂಶುಪಾಲ ಆಶಾ ನಂದೀಶ್ ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ನವನಗರ ಬ್ಯಾಂಕಿನ ಅಧ್ಯಕ್ಷ ಕೆ.ಎನ್.ಬಸಂತ್, ಮೈಸೂರು ವಸ್ತುಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಒಕ್ಕಲಿಗ ನೌಕರರ ಸ್ನೇಹಬಳಗದ ಅಧ್ಯಕ್ಷ ಲಕ್ಕಿಕುಪ್ಪೆ ಶಂಕರೇಗೌಡ, ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಶಿವರಾಮ್ ಭಾಗವಹಿಸಲಿದ್ದಾರೆ ಎಂದು ಬಳಗದ ಕಾರ್ಯದರ್ಶಿ ಎಚ್.ಎಸ್.ಈಶ್ವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net