ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬ್ಯಾಂಕ್ ಎಜಿಎಂ, ಚಿನ್ನದ ಮೇಲೆ ಸಾಲ ನೀಡಲು ಅಡಮಾನ ಇಟ್ಟುಕೊಳ್ಳುವ ಚಿನ್ನದಲ್ಲಿ ಮೋಸವಾಗಿದೆ ಎಂದು ಗ್ರಾಹಕರು ದೂರುತ್ತಿದ್ದಾರೆ. ಈ ಸಂಬಂಧ ಈಗಾಗಲೇ ಸಿಬ್ಬಂದಿಯನ್ನು ವಿಚಾರಿಸಿದ್ದು, ಬ್ಯಾಂಕ್‌ನಿಂದ ಗ್ರಾಹಕರಿಗೆ ನಷ್ಟವಾಗಿದೆಯೇ ಇಲ್ಲವೇ ಎಂಬುದನ್ನು ತನಿಖೆ ನಡೆಸಿ ಸ್ಪಷ್ಟಪಡಿಸಲಾಗುವುದು. ಎಲ್ಲವೂ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.