ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಗೆ ಹೊಸ ಸಾರಥಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ನೂತನ ಕುಲಪತಿ  ಪ್ರೊ.ಎ.ಪಿ.ಜ್ಞಾನಪ್ರಕಾಶ್
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ನೂತನ ಕುಲಪತಿ ಪ್ರೊ.ಎ.ಪಿ.ಜ್ಞಾನಪ್ರಕಾಶ್
Published on

ಪ್ರಮುಖ ಮುಖ್ಯಾಂಶಗಳು

  • ನೂತನ ಕುಲಪತಿಯಾಗಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ನಿಯೋಜನೆ
  • ಪ್ರೊ.ಎ.ಪಿ.ಜ್ಞಾನಪ್ರಕಾಶ್ ಇವರು ಮುಕ್ತ ವಿವಿ 8ನೇ ವಿಸಿ
 ಮೈಸೂರು:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ನಿಯೋಜನೆಗೊಂಡಿದ್ದಾರೆ. ಇವರು ಮುಕ್ತ ವಿವಿ 8ನೇ ವಿಸಿಯಾಗಲಿದ್ದಾರೆ.
ಹಾಲಿ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಅವರ ಮೂರು ವರ್ಷದ ಅಧಿಕಾರಾವಧಿ 2025ರ ನವೆಂಬರ್ 11ಕ್ಕೆ ಪೂರ್ಣಗೊಂಡಿತ್ತು. 
ಈ ಹಿನ್ನೆಲೆಯಲ್ಲಿ ತಮ್ಮ ಅಧಿಕಾರಾವಧಿ ವಿಸ್ತರಣೆ ಕುರಿತು ಕರಾಮುವಿ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರಿಗೆ ಪತ್ರ ಬರೆದು ಕೋರಿಕೊಂಡಿದ್ದರು. ಇದಕ್ಕೆ ಸಮ್ಮತಿಸಿರುವ ಅವರು, ಪ್ರೊ.ಶರಣಪ್ಪ ಅವರ ಅಧಿಕಾರಾವಧಿಯನ್ನು 2026ರ ಜೂನ್ 30ರವರೆಗೂ ವಿಸ್ತರಣೆ ಮಾಡಿದ್ದರು.
ಇದೀಗ ಹೆಚ್ಚುವರಿ ಅಧಿಕಾರಾವಧಿ ಸಹ ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಮುಕ್ತ ವಿವಿಗೆ ಹೊಸ ಸಾರಥಿಯನ್ನು ಕೊಟ್ಟಿದ್ದಾರೆ. ಶೋಧನಾ ಸಮಿತಿಯು ಶಿಫಾರಸು ಮಾಡಿದ್ದ ಮೂವರು ಅಭ್ಯರ್ಥಿಗಳಲ್ಲಿ ಇವರನ್ನು ನೇಮಕ ಮಾಡಲಾಗಿದೆ. ಇವರ ಅಧಿಕಾರಾವಧಿ ಮುಂದಿನ ಮೂರು ವರ್ಷವರೆಗೆ ಇರಲಿದೆ. 
ಪ್ರೊ.ಜ್ಞಾನ ಪ್ರಕಾಶ್ ಅವರು ಪ್ರಸ್ತುತ ಮೈಸೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ಪ್ರಾಧ್ಯಾಪಕರು. ಈ ಹಿಂದೆ ಮೈವಿವಿ ಪರೀಕ್ಷಾಂಗ ಕುಲಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net