ಪ್ರತಿಷ್ಠಿತ ಚಿನ್ನಾಭರಣ ಮಳಿಗೆಗಳ ದರೋಡೆ ಪ್ರಕರಣದಲ್ಲೂ ಇವರು ಭಾಗಿಗಳಾಗಿದ್ದಾರೆ. ಈ ಗ್ಯಾಂಗ್ ರಾಜ್ಯದಲ್ಲಿ ಮೊದಲ ಬಾರಿ ದರೋಡೆ ನಡೆಸಿದ್ದಾಗಿ ಮಾಹಿತಿ ಸಿಕ್ಕಿದೆ. ಕೃತ್ಯ ಎಸಗಲು ಕೊಡಗು, ಹಾಸನ, ಮೈಸೂರು ಭಾಗಗಳಲ್ಲಿ ಹುಡುಕಾಟ ನಡೆಸಿದ್ದು, ಕೊನೆಗೆ ಹುಣಸೂರಿನ ಬೈಪಾಸ್ ರಸ್ತೆಯಲ್ಲಿರುವ ಸ್ಕೈ ಗೋಲ್ಡ್ ಆ್ಯಂಡ್ ಡೈಮಂಡ್ ಚಿನ್ನಾಭರಣ ಮಳಿಗೆ ದರೋಡೆಗೆ ಪ್ಲಾೃನ್ ಮಾಡಿಕೊಂಡಿದ್ದಾರೆ ಎಂದು ಹೇಳಿದರು.