ಪೌಷ್ಟಿಕ ಆಹಾರದಿಂದ ತಾಯಿ-ಮಗುವಿಗೆ ಆರೋಗ್ಯ ಉತ್ತಮ

ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಪಂ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಅಭಿಯಾನವನ್ನು ಗಣ್ಯರು ಉದ್ಘಾಟಿಸಿದರು. ಸಿ.ವೀಣಾ, ಧನ್ಯರತಿ, ಉಮೇಶ್, ಕೆ.ಕೆ.ಶ್ರೀದೇವಿ ಇತರರು ಇದ್ದರು.
ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಪಂ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಅಭಿಯಾನವನ್ನು ಗಣ್ಯರು ಉದ್ಘಾಟಿಸಿದರು. ಸಿ.ವೀಣಾ, ಧನ್ಯರತಿ, ಉಮೇಶ್, ಕೆ.ಕೆ.ಶ್ರೀದೇವಿ ಇತರರು ಇದ್ದರು.
Published on
ಬೆಟ್ಟದಪುರ: ಗರ್ಭಿಣಿಯರು, ಬಾಣಂತಿಯರು ಹಾಗೂ ಪುಟಾಣಿ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪೌಷ್ಟಿಕ ಆಹಾರ ಸೇವನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪಿರಿಯಾಪಟ್ಟಣ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ವೀಣಾ ಹೇಳಿದರು.
ಪಿರಿಯಾಪಟ್ಟಣ ತಾಲೂಕಿನ ಚಪ್ಪರದಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಅಭಿಯಾನದಲ್ಲಿ ಮಾತನಾಡಿದರು.
ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೌಷ್ಟಿಕ ಆಹಾರ ಅತ್ಯಗತ್ಯ. ಗರ್ಭಿಣಿಯರು ಹಾಗೂ ಬಾಣಂತಿಯರು ಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವ ಮೂಲಕ ತಮ್ಮ ಆರೋಗ್ಯದ ಜತೆಗೆ ಮಗುವಿನ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು. ಅಪೌಷ್ಟಿಕತೆ ತಡೆಗಟ್ಟಲು ಅಂಗನವಾಡಿ ಕೇಂದ್ರಗಳ ಮೂಲಕ ದೊರೆಯುವ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಬೇಕು. ಪೌಷ್ಟಿಕ ಆಹಾರದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಕೆ.ಶ್ರೀದೇವಿ ಮಾತನಾಡಿ, ಮಹಿಳೆಯರು ಮತ್ತು ಮಕ್ಕಳ ಆರೋಗ್ಯದ ರಕ್ಷಣೆಯಲ್ಲಿ ಪೌಷ್ಟಿಕ ಆಹಾರ ಪ್ರಮುಖ ಪಾತ್ರ ವಹಿಸುತ್ತದೆ. ಸರ್ಕಾರದ ಪೋಷಣ್ ಅಭಿಯಾನದ ಉದ್ದೇಶಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಎಲ್ಲರೂ ಕೈಜೋಡಿಸಬೇಕು. ಬದಲಾಗುತ್ತಿರುವ ಆಧುನಿಕ ಜೀವನ ಶೈಲಿ ಅರಿತು ಪ್ರತಿಯೊಬ್ಬರೂ ಪೌಷ್ಟಿಕ ಆಹಾರ ಸೇವಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಆರೋಗ್ಯ ನಿರೀಕ್ಷಣಾಧಿಕಾರಿ ಎಚ್.ಎಸ್.ರವಿ ಮಾತನಾಡಿ, ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಗರ್ಭಿಣಿಯರು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಮಕ್ಕಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸುವ ಮೂಲಕ ಅಪೌಷ್ಟಿಕತೆ ಹಾಗೂ ವಿವಿಧ ಕಾಯಿಲೆಗಳಿಂದ ರಕ್ಷಿಸಬೇಕು. ಆರೋಗ್ಯಕರ ಜೀವನಶೈಲಿ ರೂಢಿಸಿಕೊಳ್ಳುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಮೇಲ್ವಿಚಾರಕಿ ಧನ್ಯರತಿ, ಕೋ-ಆರ್ಡಿನೇಟರ್ ಉಮೇಶ್, ಅಂಗನವಾಡಿ ಕಾರ್ಯಕರ್ತೆಯರಾದ ಸಿ.ಕೆ ಆಶಾ, ಎ.ಜೆ.ರತ್ನಾ, ಹೇಮಾ, ಸಾಕಮ್ಮ, ಸುಧಾ, ಗಾಯತ್ರಿ, ಜಯಂತಿ, ಸಹಾಯಕಿಯರಾದ ರಾಧಮ್ಮ, ಗೌರಮ್ಮ ಸೇರಿದಂತೆ ಸಿಬ್ಬಂದಿ, ಗರ್ಭಿಣಿಯರು, ಬಾಣಂತಿಯರು ಹಾಗೂ ಪುಟಾಣಿ ಮಕ್ಕಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net