ತಾಲೂಕು ಐಇಸಿ ಸಂಯೋಜಕಿ ಪುಷ್ಪಾವತಿ ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ವಿಬಿಜಿ ರಾಮ್‌ಜಿ ಯೋಜನೆಯಿಂದ ಗ್ರಾಮದಲ್ಲಿ ಅಭಿವೃದ್ಧಿ ಕೆಲಸಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ. ವೈಯಕ್ತಿಕ ಅಭಿವೃದ್ಧಿ ಯೋಜನೆಗಳಿಗೂ ವಿಬಿಜಿ ರಾಮ್‌ಜಿ ಯೋಜನೆಯನ್ನು ಉಪಯೋಗಿಸಬಹುದಾಗಿದೆ.ಈ ಯೋಜನೆಯಲ್ಲಿ ಕೆಲಸ ಪಡೆಯಲು ಗ್ರಾಮ ಪಂಚಾಯಿತಿಗೆ ಭೇಟಿ ನೀಡುವ ಮೂಲಕ ನಮೂನೆ 6ರಲ್ಲಿ ಬೇಡಿಕೆ ಸಲ್ಲಿಸಿರಿ. ನರೇಗಾ ಯೋಜನೆಯು ಮಾರ್ಪಡಾಗಿದ್ದು, ವಿಬಿಜಿ ರಾಮ್‌ಜಿ ಯೋಜನೆಯಾಗಿ ಜಾರಿಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಬಡ ಕುಟುಂಬಗಳ ಆರ್ಥಿಕ ಸಬಲೀಕರಣ ಮತ್ತು ಉದ್ಯೋಗ ಭದ್ರತೆಗಾಗಿ ಕೂಲಿಕಾರರ ಕೂಲಿ ಮೊತ್ತವನ್ನು 382 ರೂ.ಗಳಿಗೆ ಹೆಚ್ಚಿಸಲಾಗಿದ್ದು, 125 ಮಾನವ ದಿನಗಳ ಸೃಜನೆಗೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಒಂದು ಕುಟುಂಬಕ್ಕೆ 47,750 ರೂ. ದೊರೆಯಲಿದ್ದು, ಕುಟುಂಬದ ಆರ್ಥಿಕ ಅಭಿವೃದ್ಧಿಗೆ ಯೋಜನೆ ಸಹಕಾರಿಯಾಗಲಿದೆ ಎಂದರು.