ಪತ್ನಿಯನ್ನು ಕೊಂದ ಪತಿ ಬಂಧನ

ಪತಿಯೇ ಪತ್ನಿಯನ್ನು  ಕೊಲೆ
ಪತಿಯೇ ಪತ್ನಿಯನ್ನು ಕೊಲೆ
Published on
ಸರಗೂರು : ಕೌಟುಂಬಿಕ ಕಾರಣಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಹೊಸ ಬಿದರಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಘಟನೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದು ಜೈಲು ಸೇರಿದ್ದಾನೆ.
ತಾಲೂಕಿನ ಬಿದರಹಳ್ಳಿ ಗ್ರಾಮದ ನಿವಾಸಿ ಶ್ರುತಿ (30) ಕೊಲೆಯಾದವರು. ಆರೋಪಿ ಪತಿ ಜಗದೀಶ್ (35)ನನ್ನು ಸರಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ದಂಪತಿಗೆ ಒಂದು ಗಂಡು ಮತ್ತು ಹೆಣ್ಣು ಮಗು ಇದ್ದು, ಹೊಂದಾಣಿಕೆ ಇರಲಿಲ್ಲ. ಹೀಗಾಗಿ, ಮನೆಯಲ್ಲಿ ಪದೇಪದೆ ಜಗಳವಾಗುತ್ತಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಜಗದೀಶ್, ಪತ್ನಿಯನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದರು.
ಏ.2 ರಂದು ಪತಿ ಜಗದೀಶ ಪತ್ನಿ ಮೇಲೆ ಅನುಮಾನ ಪಟ್ಟು ಹಲ್ಲೆ ಮಾಡಿ, ಸೀರೆಯಿಂದ ಕುತ್ತಿಗೆ ಬಿಗಿದು ತೊಲೆಗೆ ನೇತು ಹಾಕಿದ್ದ ಎಂದು ಮೃತ ಮಹಿಳೆ ಸಹೋದರ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಸರಗೂರು ಪಟ್ಟಣ ಠಾಣೆ ಪೊಲೀಸರು ಜಗದೀಶನನ್ನು ಬಂಧಿಸಿ ವಿಚಾರಣೆ ನಡೆಸಿದರು. ಈ ಕೊಲೆಯನ್ನು ತಾನೇ ಮಾಡಿರುವುದಾಗಿ ಒಪ್ಪಿಕೊಂಡ ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಶ್ರುತಿ ಮೃತದೇಹವನ್ನು ಸಂಬಂಧಿಕರಿಗೆ ನೀಡಲಾಗಿದೆ ಎಂದು ಸರಗೂರು ಪೋಲಿಸ್ ಠಾಣೆ ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net