ಮೈಸೂರು: ಒಳಮೀಸಲಾತಿ ರೋಸ್ಟರ್ ಹಂಚಿಕೆ ವಿರೋಧಿಸಿ, ಹಳೇ ಮೀಸಲಾತಿ ನಿಯಮದಂತೆ ತ್ವರಿತ ನೇಮಕಾತಿಗೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರೃ ಉದ್ಯಾನದಲ್ಲಿ ಮಾ.24ರಂದು ಬೆಳಗ್ಗೆ 10ಕ್ಕೆ ಬೃಹತ್ ಸಮಾವೇಶವನ್ನು ಕೈಗೊಂಡಿದ್ದು, ಇದರಲ್ಲಿ ಬಂಜಾರ, ಭೋವಿ, ಕೊರಮ, ಕೊರಚ, ಚರ್ಮಕಾರ, ಸೂಕ್ಷ್ಮ ಪರಿಶಿಷ್ಟ ಜಾತಿಗಳ ಸಮುದಾಯದವರು ಪಾಲ್ಗೊಳ್ಳಬೇಕು ಎಂದು ಚಿತ್ರದುರ್ಗದ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಕರೆ ನೀಡಿದರು.