‘ಕಾವೇರಿ’ ಏಕಪಕ್ಷೀಯ ಆದೇಶಕ್ಕೆ ವಿರೋಧ

ಮೈಸೂರು ಕನ್ನಡ ವೇದಿಕೆಯ ವತಿಯಿಂದ ಗುರುವಾರ ನಗರದ ಅಗ್ರಹಾರ ವೃತ್ತದಲ್ಲಿ ಮೇಣದ ಬತ್ತಿ ಬೆಳಗುವ ಮೂಲಕ ಪ್ರತಿಭಟನೆ ಮಾಡಲಾಯಿತು.
ಮೈಸೂರು ಕನ್ನಡ ವೇದಿಕೆಯ ವತಿಯಿಂದ ಗುರುವಾರ ನಗರದ ಅಗ್ರಹಾರ ವೃತ್ತದಲ್ಲಿ ಮೇಣದ ಬತ್ತಿ ಬೆಳಗುವ ಮೂಲಕ ಪ್ರತಿಭಟನೆ ಮಾಡಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ಕನ್ನಡ ವೇದಿಕೆಯ ವತಿಯಿಂದ ಪ್ರತಿಭಟನೆ
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ನಿಯಂತ್ರಣ ಸಮಿತಿಯ ಏಕಪಕ್ಷೀಯ ನೀತಿ ಖಂಡಿಸಿ ಮೈಸೂರು ಕನ್ನಡ ವೇದಿಕೆಯ ವತಿಯಿಂದ ಗುರುವಾರ ನಗರದ ಅಗ್ರಹಾರ ವೃತ್ತದಲ್ಲಿ ಮೇಣದ ಬತ್ತಿ ಬೆಳಗುವ ಮೂಲಕ ಪ್ರತಿಭಟನೆ ಮಾಡಲಾಯಿತು.
ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ತೀವ್ರ ಮಳೆ ಕೊರತೆ ಎದುರಾಗಿದ್ದು, ಅನ್ನದಾತರು ಕಂಗೆಟ್ಟಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಮುಂಬರುವ ದಿನಗಳಲ್ಲಿ ಜನ- ಜಾನುವಾರುಗಳಿಗೂ ಕುಡಿಯುವ ನೀರು ಸಿಗದ ಭೀಕರ ವಾತಾವರಣ ನಿರ್ಮಾಣವಾಗಲಿದೆ. ಇಂತಹ ಬಿಕ್ಕಟ್ಟಿನ ಸಮಯದಲ್ಲೂ ವಾಸ್ತವ ಸ್ಥಿತಿ ಅರಿಯದೆ ಕೇಂದ್ರ ಸರ್ಕಾರದ ಕಾವೇರಿ ನಿಯಂತ್ರಣ ಸಮಿತಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶಿಸುತ್ತಿರುವುದು ತೀರಾ ಅಸಮಂಜಸ ಹಾಗೂ ಕನ್ನಡಿಗರಿಗೆ ಎಸಗುತ್ತಿರುವ ಅನ್ಯಾಯ ಎಂದು ಕಿಡಿಕಾರಿದರು.
ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಜಲಸಂಪನ್ಮೂಲ ಸಚಿವರು ತಕ್ಷಣವೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕು. ಕಾವೇರಿ ನಿಯಂತ್ರಣ ಸಮಿತಿಯ ನಿರ್ಧಾರಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವ ಮೂಲಕ ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರು, ಸಾರ್ವಜನಿಕರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ, ಪದಾಧಿಕಾರಿಗಳಾದ ನಾಲಾಬೀದಿ ರವಿ, ಗೋಪಿ, ಬೋಗಾದಿ ಸಿದ್ದೇಗೌಡ, ಪ್ಯಾಲೇಸ್ ಬಾಬು, ಸಿದ್ದಪ್ಪ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net