ಶಿಕ್ಷಣ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಫೌಂಡೇಷನ್, ಸದ್ಯ 290 ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುತ್ತಿದ್ದು, ಇದನ್ನು 1,000ಕ್ಕೆ ಹೆಚ್ಚಿಸುವ ಗುರಿ ಹೊಂದಿದೆ. ಕಳೆದ 20 ವರ್ಷಗಳಲ್ಲಿ 38,500ಕ್ಕೂ ಹೆಚ್ಚು ಬಡ ವಿದ್ಯಾರ್ಥಿಗಳಿಗೆ 2 ಲಕ್ಷಕ್ಕೂ ಅಧಿಕ ನೋಟ್‌ಬುಕ್‌ಗಳನ್ನು ವಿತರಿಸಲಾಗಿದೆ. ಇದರ ಮುಂದುವರಿದ ಭಾಗವಾಗಿ ಜುಲೈ 17ರಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ವಾರ್ಷಿಕ ಶೈಕ್ಷಣಿಕ ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ.