ಕಾರು ಡಿಕ್ಕಿಯಾಗಿ ಪಾದಚಾರಿ ಸಾವು

ರಸ್ತೆ ಅಪಘಾತ
ರಸ್ತೆ ಅಪಘಾತ
Published on

ಪ್ರಮುಖ ಮುಖ್ಯಾಂಶಗಳು

  • ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪರಾರಿ
  • ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವು
  • ಎನ್.ಆರ್. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮೈಸೂರು: ನಗರದ ನಾರಾಯಣ ಹೃದಯಾಲಯ ಆಸ್ಪತ್ರೆ ಬಳಿಯ ರಿಂಗ್ ರಸ್ತೆಯಲ್ಲಿ ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟಿದ್ದಾರೆ. 
ಬನ್ನಿಮಂಟಪದಲ್ಲಿನ ಹನುಮಂತನಗರ ನಿವಾಸಿ ಮೊಹಮ್ಮದ್ ನದೀಂ(34) ಮೃತರು. ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. 
ತೀವ್ರ ಗಾಯಗೊಂಡ ನದೀಂ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ
 ಎಂದು ಪೊಲೀಸರು ತಿಳಿಸಿದ್ದಾರೆ. ಎನ್.ಆರ್. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net