ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಆಲನಹಳ್ಳಿ ರಾಜಣ್ಣ ಆಯ್ಕೆ

ಪಿರಿಯಾಪಟ್ಟಣ ಪಿಎಲ್‌ಡಿ ಬ್ಯಾಂಕ್ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಆಲನಹಳ್ಳಿ ರಾಜಣ್ಣ ಹಾಗೂ ಮುತ್ತೂರು ಸುರೇಶ್ ಅವರನ್ನು ಮುಖಂಡರು ಅಭಿನಂದಿಸಿದರು. ನಿತಿನ್ ವೆಂಕಟೇಶ್, ರಘು, ಮಂಜು, ಜವರೇಗೌಡ, ಪುಟ್ಟರಾಜು, ಭೀಮಣ್ಣ ಇತರರಿದ್ದರು.
ಪಿರಿಯಾಪಟ್ಟಣ ಪಿಎಲ್‌ಡಿ ಬ್ಯಾಂಕ್ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಆಲನಹಳ್ಳಿ ರಾಜಣ್ಣ ಹಾಗೂ ಮುತ್ತೂರು ಸುರೇಶ್ ಅವರನ್ನು ಮುಖಂಡರು ಅಭಿನಂದಿಸಿದರು. ನಿತಿನ್ ವೆಂಕಟೇಶ್, ರಘು, ಮಂಜು, ಜವರೇಗೌಡ, ಪುಟ್ಟರಾಜು, ಭೀಮಣ್ಣ ಇತರರಿದ್ದರು.
Published on
ಪಿರಿಯಾಪಟ್ಟಣ: ತಾಲೂಕಿನ ಪಿಎಲ್‌ಡಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಆಲನಹಳ್ಳಿ ರಾಜಣ್ಣ ಹಾಗೂ ಉಪಾಧ್ಯಕ್ಷರಾಗಿ ಮುತ್ತೂರು ಸುರೇಶ್ ಅವಿರೋಧವಾಗಿ ಆಯ್ಕೆಯಾದರು.
ಪಕ್ಷದ ಆಂತರಿಕ ಒಪ್ಪಂದದಂತೆ ಈ ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಕೆ.ಹೊಲದಪ್ಪ ಮತ್ತು ಉಪಾಧ್ಯಕ್ಷರಾಗಿದ್ದ ಮಮತಾ ಅವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರಿಂದ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಸೋಮವಾರ ಚುನಾವಣೆ ನಿಗದಿಯಾಗಿತ್ತು.
ಇವರಿಬ್ಬರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಇವರಿಬ್ಬರ ಆಯ್ಕೆಯನ್ನು ಚುನಾವಣಾ ಅಧಿಕಾರಿಗಳು ಘೋಷಣೆ ಮಾಡಿದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಮಾತನಾಡಿ, ಶಾಸಕ ಕೆ.ವೆಂಕಟೇಶ್ ಅವರ ನಿರ್ಧಾರದಂತೆ ನಮ್ಮ ಪಕ್ಷದ ಆಂತರಿಕ ಒಪ್ಪಂದದ ಅನ್ವಯ ಪಿಎಲ್‌ಡಿ ಬ್ಯಾಂಕಿನ 5 ವರ್ಷಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಧಿಯನ್ನು ನಾಲ್ಕು ಭಾಗಗಳಾಗಿ ತಲಾ 15 ತಿಂಗಳಿಗೆ ನಿಗದಿಪಡಿಸಿದ್ದು, ಮೊದಲ ಅವಧಿಯಲ್ಲಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ರಾಜೀನಾಮೆ ನೀಡಿದ್ದು ಎರಡನೇ ಅವಧಿಗೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಮಾಡಲಾಗಿದೆ ಎಂದರು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಬ್ಯಾಂಕಿನ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬ್ಯಾಂಕಿನ ಏಳಿಗೆಗೆ ಶ್ರಮಿಸುವಂತೆ ಕಿವಿಮಾತು ಹೇಳಿದರು.
ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಎಲ್ಲ ನಿರ್ದೇಶಕರು ಸಹಕಾರ ನೀಡಬೇಕು, ರೈತರ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ ನೀಡುವ ಮೂಲಕ ಉತ್ತಮ ಆಡಳಿತ ನೀಡಬೇಕು ಎಂದು ಸಲಹೆ ನೀಡಿದರು.
ನೂತನ ಅಧ್ಯಕ್ಷ ಆಲನಹಳ್ಳಿ ರಾಜಣ್ಣ ಮಾತನಾಡಿ, ತಾಲೂಕಿನ ಶಾಸಕ ಹಾಗೂ ಮಾಜಿ ಸಚಿವ ಕೆ.ವೆಂಕಟೇಶ್ ಅವರ ಬೆಂಬಲದಿಂದ ನಾವು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಅಲಂಕರಿಸಿದ್ದು, ಬ್ಯಾಂಕಿನ ಎಲ್ಲ ನಿರ್ದೇಶಕರ ಸಹಕಾರದೊಂದಿಗೆ ಬ್ಯಾಂಕಿನ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಮುಖಂಡರಾದ ರಘು, ಮಂಜು, ಜವರೇಗೌಡ, ಪುಟ್ಟರಾಜು, ಭೀಮಣ್ಣ, ಬ್ಯಾಂಕಿನ ನಿರ್ದೇಶಕರು, ಸಿಬ್ಬಂದಿ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net