ಫ್ಲೆಕ್ಸೃ್, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ: ಜಿಲ್ಲಾಡಳಿತ ಆದೇಶ

ಜಿ.ಲಕ್ಷ್ಮೀಕಾಂತರೆಡ್ಡಿ
ಜಿ.ಲಕ್ಷ್ಮೀಕಾಂತರೆಡ್ಡಿ
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲೆಯ ಪರಂಪರೆ ಹಾಗೂ ಸೌಂದರ್ಯಕ್ಕೆ ಧಕ್ಕೆ ಉಂಟು ಮಾಡಬಾರದು
  • ನಿಗದಿತ ಅವಧಿ ಮುಕ್ತಾಯದ ನಂತರ ಅಳವಡಿಸಿದವರೇ ತೆರವುಗೊಳಿಸಬೇಕಾಗುತ್ತದೆ
ಮೈಸೂರು:ಸಂಘ-ಸಂಸ್ಥೆಗಳ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಫ್ಲೆಕ್ಸೃ್ ಮತ್ತು ಬ್ಯಾನರ್‌ಗಳನ್ನು ಅಳವಡಿಸಬೇಕಾಗಿದ್ದಲ್ಲಿ ಆಯಾ ಪ್ರದೇಶದ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಸಾರ್ವಜನಿಕ ಆಸ್ತಿಗಳಿಗೆ ಹಾನಿ ಉಂಟಾಗದಂತೆ ನಿಗದಿತ ಅವಧಿ ಮುಕ್ತಾಯದ ನಂತರ ತೆರವುಗೊಳಿಸಬೇಕಾಗುತ್ತದೆ. ಮೈಸೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಪ್ರದೇಶಗಳಲ್ಲಿ ಅನಧಿಕೃತವಾಗಿ ಫ್ಲೆಕ್ಸೃ್ ಮತ್ತು ಬ್ಯಾನರ್ಸ್‌ ಅನ್ನು ಅಳವಡಿಸಿರುವುದು ಜಿಲ್ಲೆಯ ಪರಂಪರೆ ಹಾಗೂ ಸೌಂದರ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಆದೇಶದಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಸಾರ್ವಜನಿಕ ಸ್ಥಳಗಳನ್ನು (ವಿರೂಪಗೊಳಿಸುವುದನ್ನು ಪ್ರತಿಬಂಧಿಸುವ ತಿದ್ದುಪಡಿ) ಅಧಿನಿಯಮ 2020 ರನ್ವಯ ಕಲಂ 3 ರನ್ವಯ ಜಾಹೀರಾತುಗಳ ಮೂಲಕ ಅನಧಿಕೃತವಾಗಿ ವಿರೂಪಗೊಳಿಸುವುದಕ್ಕೆ ಗರಿಷ್ಠ 6 ತಿಂಗಳು ಸೆರೆವಾಸ ಅಥವಾ ಗರಿಷ್ಠ ಸಾವಿರ ರೂ.ಗಳವರೆಗೆ ದಂಡ ಅಥವಾ ಎರಡು ವಿಧವಾದ ದಂಡನೆ ವಿಧಿಸಲು ಅವಕಾಶ ಇರುತ್ತದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಮುನ್ಸಿಪಲ್ ಆಕ್ಟೃ್ 1964ರ ಕಲಂ 133 ಹಾಗೂ 136ರಲ್ಲಿ ಕ್ರಮವಾಗಿ ಜಾಹೀರಾತು ಹಾಗೂ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸುವ ಬಗ್ಗೆ ಸ್ಪಷ್ಟವಾದ ಆದೇಶವಿರುತ್ತದೆ. ಆದ್ದರಿಂದ ಮೈಸೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಸಂಘ-ಸಂಸ್ಥೆಗಳ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಫ್ಲೆಕ್ಸ್ ಮತ್ತು ಬ್ಯಾನರ್ಸ್‌ ಅಳವಡಿಸಲು ಅನುಮತಿ ನೀಡುವಾಗ ಕಾರ್ಯಕ್ರಮಗಳ ನಿಗದಿತ ಅವಧಿಗೆ ಮಾತ್ರ ಸೀಮಿತಗೊಳಿಸಿ, ಕಾರ್ಯಕ್ರಮಗಳು ಮುಕ್ತಾಯವಾದ ನಂತರ ಸಂಬಧಪಟ್ಟವರೇ ಫ್ಲೆಕ್ಸ್ ಮತ್ತು ಬ್ಯಾನರ್ಸ್‌ ಆನ್ನು ಕಡ್ಡಾಯವಾಗಿ ತೆರವುಗೊಳಿಸಬೇಕು ಎಂದು ತಿಳಿಸಿದ್ದಾರೆ.
ಒಂದು ವೇಳೆ ತೆರವುಗೊಳಿಸದಿದ್ದರೇ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಮೈಸೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಪ್ರದೇಶಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ಕೂಡಲೇ ತೆರವುಗೊಳಿಸುವಂತೆ ಸೂಚಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net