ಆರೋಗ್ಯ ಕಾಪಾಡಿಕೊಳ್ಳುವಲ್ಲಿ ವೈಯಕ್ತಿಕ ಸ್ವಚ್ಛತೆ ಮುಖ್ಯ

ಹನಗೋಡು ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣ ದಿನದ ಹಿನ್ನೆಲೆಯಲ್ಲಿ  ವಿದ್ಯಾರ್ಥಿಗಳಿಗೆ ಜಂತುಹುಳು ನಿವಾರಕ ಮಾತ್ರೆಗಳನ್ನು ಡಾ ಹೇಮಂತ್ ಕುಮಾರ್ ವಿತರಿಸಿದರು. ಉಪಪ್ರಾಂಶುಪಾಲ ಸಂತೋಷ್ ಕುಮಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಭಾಕರ್ ಇದ್ದರು.
ಹನಗೋಡು ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣ ದಿನದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಜಂತುಹುಳು ನಿವಾರಕ ಮಾತ್ರೆಗಳನ್ನು ಡಾ ಹೇಮಂತ್ ಕುಮಾರ್ ವಿತರಿಸಿದರು. ಉಪಪ್ರಾಂಶುಪಾಲ ಸಂತೋಷ್ ಕುಮಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಭಾಕರ್ ಇದ್ದರು.
Published on
ಹನಗೋಡು: ಮಕ್ಕಳ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ವೈಯಕ್ತಿಕ ಸ್ವಚ್ಛತೆ ಮಹತ್ವದ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ನಿಗಾವಹಿಸಬೇಕು ಎಂದು ಹನಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ.ಹೇಮಂತ್ ಕುಮಾರ್ ತಿಳಿಸಿದರು.
ಹನಗೋಡು ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣ ದಿನದ ಹಿನ್ನೆಲೆಯಲ್ಲಿ ಮಂಗಳವಾರ ವಿದ್ಯಾರ್ಥಿಗಳಿಗೆ ಜಂತುಹುಳು ನಿವಾರಕ ಮಾತ್ರೆ ವಿತರಣೆ ಮಾಡಿ ಮಾತನಾಡಿ, ಸರ್ಕಾರವು ವರ್ಷಕ್ಕೆ ಎರಡು ಬಾರಿ 1 ರಿಂದ 19 ವರ್ಷದ ಮಕ್ಕಳಿಗೆ ಉಚಿತವಾಗಿ ಜಂತುಹುಳು ನಿವಾರಕ ಮಾತ್ರೆಗಳನ್ನು ವಿತರಿಸುತ್ತಿದ್ದು, ಇದು ಮಕ್ಕಳ ಆರೋಗ್ಯ ಸುಧಾರಣೆ ಹಾಗೂ ಉತ್ತಮ ಜೀರ್ಣಕ್ರಿಯೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.
ಈ ದಿನ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಮಾಪ್‌ಅಪ್ ಡೇ ಅಡಿಯಲ್ಲಿ ಅವರು ಶಾಲೆಗೆ ಹಾಜರಾದ ದಿನ ಮಾತ್ರೆ ವಿತರಿಸಲಾಗುವುದು. ಮಕ್ಕಳು ಮಾತ್ರೆಯನ್ನು ನುಂಗದೆ ಚೀಪುವ ಮೂಲಕ ಸೇವಿಸಿ ಜಂತುಹುಳಗಳಿಂದ ರಕ್ಷಣೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಸಂತೋಷ್ ಕುಮಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಭಾಕರ್ ಮಾತನಾಡಿದರು. ಶಿಕ್ಷಕರಾದ ಛಾಯಾಮಣಿ, ಪ್ರಸನ್ನ ಕುಮಾರ್, ವೀರಣ್ಣ ಕರಡಿ, ವರ್ಷ, ಆರೋಗ್ಯ ಇಲಾಖೆಯ ಮೊಹಮ್ಮದ್ ಅಜರ್, ಆಶಾ ಕಾರ್ಯಕರ್ತೆ ಪುಷ್ಪಲತಾ ಇದ್ದರು,
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net