ಪಡಿತರ ಸರ್ವರ್ ಪ್ರಾಬ್ಲಂ ಸರಿಪಡಿಸಲು ಭಾರತೀಯ ಗ್ರಾಹಕ ಪಂಚಾಯತ್ ನಿಂದ ಮನವಿ ಸಲ್ಲಿಕೆ
ಸರ್ವರ್ ಸಮಸ್ಯೆಯಿಂದ ಪಡಿತರ ಗ್ರಾಹಕರಿಗೆ ಅಗುತ್ತಿರುವ ಸಮಸ್ಯೆ ಸರಿಪಡಿಸುವಂತೆ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದಿಂದ ಮನವಿ ಸಲ್ಲಿಸಲಾಯಿತು. ವಿಕ್ರಂ ಅಯ್ಯಂಗಾರ್, ಡಾ.ಜಿ ವಿ ರವಿಶಂಕರ್, ಶ್ರೀೀಕಂಠೇಶ್, ಆನಂದ್, ಸಂದೇಶ್, ದುರ್ಗಾ ಪ್ರಸಾದ್, ಹರೀಶ್,ದಯಾನಂದ ನಾಯಕ್, ದೂರ ರಾಜಣ್ಣ ಇತತರು ಇದ್ದರು.
ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರು ನ್ಯಾಯಬೆಲೆ ಅಂಗಡಿಗಳ ಮುಂದೆ ದಿನ ಪೂರ್ತಿ ಕಾಯುವ ಪರಿಸ್ಥಿತಿ ನಿರ್ಮಾಣಗೊಂಡಿದೆ
ತಾಂತ್ರಿಕ ಅಡಚಣೆಯಿಂದಾಗಿ ಕೂಲಿ ಕೆಲಸ ಮಾಡುವವರು ಕೆಲಸಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ
ಮೈಸೂರು:ಆಹಾರ, ನಾಗರಿಕ ಸರಬರಾಜು ಇಲಾಖೆಯಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಣೆ ಮಾಡಲಾಗುತ್ತಿರುವ ಪಡಿತರವನ್ನು ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ಸರಿಯಾಗಿ ತಲುಪಿಸಲು ಆಗುತ್ತಿಲ್ಲ ಎಂದು ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದಿಂದ ಸರ್ಕಾರಕ್ಕೆ ದೂರು ನೀಡಲಾಯಿತು.
ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರಿಗೆ ಸರಿಯಾಗಿ ಅಕ್ಕಿ, ರಾಗಿ ಸೇರಿದಂತೆ ಇನ್ನಿತರ ಪಡಿತರವನ್ನು ತಲುಪಿಸಲು ತುಂಬ ಅಡಚಣೆಯಾಗುತ್ತಿದೆ. ಅದನ್ನು ಸರಿಪಡಿಸಿ ಗ್ರಾಹಕರಿಗೆ ಸೂಕ್ತ ಸಮಯದಲ್ಲಿ ಪಡಿತರ ವಿತರಣೆ ಆಗುವಂತೆ ಕ್ರಮಕೈಗೊಳ್ಳಲು ಕೋರಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಡಾ.ಮಂಟೇಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು.
ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರು ನ್ಯಾಯಬೆಲೆ ಅಂಗಡಿಗಳ ಮುಂದೆ ದಿನ ಪೂರ್ತಿ ಕಾಯುವ ಪರಿಸ್ಥಿತಿ ನಿರ್ಮಾಣಗೊಂಡಿದೆ. ಗ್ರಾಮೀಣ ಭಾಗದ ಕೆಲ ನ್ಯಾಯಬೆಲೆ ಅಂಗಡಿಯಲ್ಲಿ ದಿನ ಪೂರ್ತಿ ಕಾದು ನಿಂತರೂ ಸರ್ವರ್ ಸಮಸ್ಯೆಯಿಂದ ಅಕ್ಕಿ ಲಭಿಸದೆ ಬರಿಗೈಯಲ್ಲಿ ವಾಪಸ್ ಹೋಗುವಂತಾಗಿದೆ ಎಂದು ಹೇಳಿದರು.
ಈ ರೀತಿಯ ತಾಂತ್ರಿಕ ಅಡಚಣೆಯಿಂದಾಗಿ ಕೂಲಿ ಕೆಲಸ ಮಾಡುವವರು ಕೆಲಸಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಇದರಿಂದ ನ್ಯಾಯಬೆಲೆ ಅಂಗಡಿ ಸಿಬ್ಬಂದಿ ಜತೆ ಜಗಳ ಮಾಡುವುದು ಸಾಮಾನ್ಯವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳಲ್ಲಿ ವಿಚಾರಿಸಿದರೆ ಎರಡು ತಿಂಗಳ ಅಕ್ಕಿಯನ್ನು ಒಂದೇ ತಿಂಗಳಿನಲ್ಲಿ ನೀಡುತ್ತಿರುವುದರಿಂದ ಸರ್ವರ್ ಸಮಸ್ಯೆ ಉದ್ಭವಿಸಿದೆ ಎಂದು ಸಬೂಬು ನೀಡುತ್ತಿದ್ದಾರೆ. ಸರ್ವರ್ ಸಮಸ್ಯೆ ತಿಂಗಳುಗಟ್ಟಲೇ ಹೀಗೆ ಮುಂದುವರಿದರೆ ಕೆಲವರು ಪಡಿತರ ಅಕ್ಕಿ ಪಡೆಯುವಲ್ಲಿ ವಂಚಿತರಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಮೇ ತಿಂಗಳ ಅಕ್ಕಿಯನ್ನು ರಾಜ್ಯ ಸರ್ಕಾರ ವಿತರಿಸಿಲ್ಲ. ಕೇಂದ್ರ ಸರ್ಕಾರವು ಮುಂಗಡವಾಗಿ 2 ತಿಂಗಳಿಗೆ ಬಿಡುಗಡೆ ಮಾಡಿದ ಅಕ್ಕಿಯನ್ನು ಹೊಂದಾಣಿಕೆ ಮಾಡಿಕೊಂಡು ಎರಡೆರಡು ಬಾರಿ ಗ್ರಾಹಕರಿಂದ ಬೆರಳ ಅಚ್ಚು ತೆಗೆದುಕೊಳ್ಳುವುದರಿಂದ ಸರ್ವರ್ ಸಮಸ್ಯೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮೇ ತಿಂಗಳ ಅಕ್ಕಿಯನ್ನು ಜೂನ್ ಮೊದಲ ವಾರದವರೆಗೂ ನೀಡಲು ಸೂಕ್ತ ಆದೇಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಉಪಾಧ್ಯಕ್ಷ ವಿಕ್ರಂ ಅಯ್ಯಂಗಾರ್, ರಾಜ್ಯ ಸಂಚಾಲಕ ಡಾ.ಜಿ ವಿ ರವಿಶಂಕರ್, ಕಾರ್ಯದರ್ಶಿ ಶ್ರೀಕಂಠೇಶ್, ಮುಖಂಡರಾದ ಆನಂದ್, ಸಂದೇಶ್, ದುರ್ಗಾ ಪ್ರಸಾದ್, ಹರೀಶ್, ದಯಾನಂದ ನಾಯಕ್, ದೂರ ರಾಜಣ್ಣ ಇತರರು ಇದ್ದರು.