ವಿವಿಧ ಸೌಲಭ್ಯ ಘೋಷಿಸುವಂತೆ ಆಗ್ರಹಿಸಿ ಸಿಎಂಗೆ ಮನವಿ ಸಲ್ಲಿಕೆ

ಬಜೆಟ್‌ನಲ್ಲಿ ಆದಿವಾಸಿ ಸಮುದಾಯಕ್ಕೆ ಸವಲತ್ತು ಘೋಷಿಸಬೇಕು ಎಂದು ಆಗ್ರಹಿಸಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಯೋಗೀಶ್ ಅವರಿಗೆ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಸದಸ್ಯರು ಮನವಿ ಸಲ್ಲಿಸಿದರು. ಎಂ.ಕೃಷ್ಣಯ್ಯ, ಸುಬ್ರಮಣ್ಯ, ಜಿ.ಸ್ವಾಮಿ ಇದ್ದರು.
ಬಜೆಟ್‌ನಲ್ಲಿ ಆದಿವಾಸಿ ಸಮುದಾಯಕ್ಕೆ ಸವಲತ್ತು ಘೋಷಿಸಬೇಕು ಎಂದು ಆಗ್ರಹಿಸಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಯೋಗೀಶ್ ಅವರಿಗೆ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಸದಸ್ಯರು ಮನವಿ ಸಲ್ಲಿಸಿದರು. ಎಂ.ಕೃಷ್ಣಯ್ಯ, ಸುಬ್ರಮಣ್ಯ, ಜಿ.ಸ್ವಾಮಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಅಧ್ಯಕ್ಷ ಎಂ.ಕೃಷ್ಣಯ್ಯ
  • ಪರಿಶಿಷ್ಟ ಪಂಗಡಗಳಿಗೆ ಒಳಮೀಸಲಾತಿ
  • ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆ
ಹುಣಸೂರು: ಪರಿಶಿಷ್ಟ ಪಂಗಡಗಳಿಗೆ ಒಳಮೀಸಲಾತಿ, ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಅಧ್ಯಕ್ಷ ಎಂ.ಕೃಷ್ಣಯ್ಯ ತಿಳಿಸಿದರು.
ಜ.29ರಂದು ಮುಖ್ಯಮಂತ್ರಿಯಾದಿಯಾಗಿ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪರಿಶಿಷ್ಟವರ್ಗಗಳ ಇಲಾಖೆ ನಿರ್ದೇಶಕ ಯೋಗೀಶ್, ಅಲೆಮಾರಿ ನಿಗಮದ ಅಧ್ಯಕ್ಷೆ ಡಾ.ಪಲ್ಲವಿ ಮತ್ತಿತರರಿಗೆ ಮನವಿ ಸಲ್ಲಿಸಲಾಗಿದೆ. ಪರಿಶಿಷ್ಟ ಪಂಗಡಗಳಿಗೆ ಒಳಮೀಸಲಾತಿ ಕಲ್ಪಿಸುವ ಮೂಲಕ 48ಕ್ಕೂ ಹೆಚ್ಚು ಸಮುದಾಯಗಳು, ಅದರಲ್ಲೂ ಚಂಚು, ಕತೋರಿ ಮತ್ತು ಕಾತಕಾರಿಯಂತಹ ಸೂಕ್ಷ್ಮಾತಿಸೂಕ್ಷ್ಮ ಸಮುದಾಯಗಳಿಗೆ ಉದ್ಯೋಗ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅನುಕೂಲವಾಗಲಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ವರ್ಷ ಆ.31ರಂದು ವಿಮುಕ್ತ ದಿನವನ್ನು ಆಚರಿಸುವ ಮೂಲಕ ಬ್ರಿಟಿಷರ ಕಾಲದಲ್ಲಿ ಅಪರಾಧಿ ಸಮುದಾಯವೆಂದು ಗುರುತಿಸಲ್ಪಟ್ಟು, ನಂತರ ದೇಶದಲ್ಲಿ ಆ ನಾಮಾಂಕಿತದಿಂದ ವಿಮುಕ್ತರಾದ ಕುಟುಂಬಗಳ ಸರ್ವತೋಮುಖ ಅಭಿವೃದ್ಧಿಗಾಗಿ ದಿನ ಆಚರಿಸಬೇಕು. ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಅರಣ್ಯ ಹಕ್ಕು ಕಾಯ್ದೆಯ ಸಮಗ್ರ ಜಾರಿಯ ಮೂಲಕ ಆದಿವಾಸಿಗಳ ಬದುಕಲ್ಲಿ ಆಶಾಕಿರಣ ಮೂಡಿಸಬೇಕು. ಬುಡಕಟ್ಟುಗಳ ಸಾಂಸ್ಕೃತಿಕ ಕಾರ್ಯಕ್ರಮ ರಾಜ್ಯದೆಲ್ಲೆಡೆ ಆಚರಿಸುವಂತಾಗಬೇಕು. ಪಿವಿಟಿಜಿಯಲ್ಲದ ಇತರ ಆದಿವಾಸಿ ಸಮುದಾಯಗಳಿಗೂ ವಸತಿ ಸೌಲಭ್ಯ ಯೋಜನೆಯನ್ನು ವಿಸ್ತರಿಸಬೇಕೆಂದು ಮನವಿ ಮಾಡಿದರು.
ಲ್ಯಾಂಪ್ಸ್ ಸೊಸೈಟಿ ತಾಲೂಕು ಅಧ್ಯಕ್ಷ ಸುಬ್ರಮಣ್ಯ, ಪರಿಷತ್‌ನ ಜಂಟಿ ಕಾರ್ಯದರ್ಶಿ ಜಿ.ಸ್ವಾಮಿ, ನಿರ್ದೇಶಕ ಶಿವಾಜಿ ಸುದ್ದಿಗೋಷ್ಠಿಯಲ್ಲಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net