ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಕೆ

ಮೈಸೂರಿಗೆ ಭೇಟಿ ನೀಡಿದ್ದ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾದ ಕೆ. ವಿವೇಕಾನಂದ ಮನವಿ ಸಲ್ಲಿಸಿದರು. ಜಿ.ಟಿ. ದೇವೇಗೌಡ ಇದ್ದರು.
ಮೈಸೂರಿಗೆ ಭೇಟಿ ನೀಡಿದ್ದ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾದ ಕೆ. ವಿವೇಕಾನಂದ ಮನವಿ ಸಲ್ಲಿಸಿದರು. ಜಿ.ಟಿ. ದೇವೇಗೌಡ ಇದ್ದರು.
Published on
ಶಾಲಾ ಶಿಕ್ಷಣ ಇಲಾಖೆಯ ಮಾನವ ಸಂಪನ್ಮೂಲ ಹಾಗೂ ಭೌತಿಕ ಸಂಪನ್ಮೂಲಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯರು ಸಭೆಗಳಲ್ಲಿ ಪ್ರಸ್ತಾಪಿಸಿದ್ದ ಪ್ರಮುಖ ಬೇಡಿಕೆಗಳನ್ನು ತ್ವರಿತವಾಗಿ ಈಡೇರಿಸುವಂತೆ ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಕೆ. ವಿವೇಕಾನಂದ ಅವರು ಮೈಸೂರಿಗೆ ಭೇಟಿ ನೀಡಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಶಾಲಾ ಶಿಕ್ಷಣ ಇಲಾಖೆಯ ಮಾನವ ಸಂಪನ್ಮೂಲ ಹಾಗೂ ಭೌತಿಕ ಸಂಪನ್ಮೂಲಗಳ ಅಭಿವೃದ್ಧಿ ಕುರಿತು ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರೊಂದಿಗೆ ಈ ಹಿಂದೆ ಹಲವು ಸಭೆಗಳನ್ನು ನಡೆಸಲಾಗಿತ್ತು. ಸಭೆಗಳಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ಸದಸ್ಯರು ಪ್ರಸ್ತಾಪಿಸಿದ್ದರು. ಈ ಪೈಕಿ ಕೆಲವು ಬೇಡಿಕೆಗಳು ಈಡೇರಿದ್ದು, ಇನ್ನೂ ಕೆಲವು ಪ್ರಸ್ತಾಪಗಳು ಬಾಕಿ ಉಳಿದಿವೆ. ಅವುಗಳನ್ನು ಶೀಘ್ರವಾಗಿ ಕೈಗೆತ್ತಿಕೊಂಡು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರೌಢಶಾಲೆ ಸಹ ಶಿಕ್ಷಕರಿಗೆ ಉಪನ್ಯಾಸಕರಾಗಿ ಬಡ್ತಿ ನೀಡುವ ಪ್ರಕ್ರಿಯೆ ತ್ವರಿತಗೊಳಿಸುವುದು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರಿಗೆ ಪ್ರಾಂಶುಪಾಲರಾಗಿ ಬಡ್ತಿ, ಪ್ರೌಢಶಾಲಾ ಸಹಶಿಕ್ಷಕರಿಗೆ ಮುಖ್ಯಶಿಕ್ಷಕರಾಗಿ ಪದೋನ್ನತಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಿಗೆ ವಿವಿಧ ಹಂತದ ಹುದ್ದೆಗಳಿಗೆ ಬಡ್ತಿ ನೀಡಬೇಕು, ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಣಕ್ಕೆ ಅಗತ್ಯವಿರುವ ಹೆಚ್ಚುವರಿ ಅತಿಥಿ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡಬೇಕು. ಇಲಾಖೆಯ ವಿವಿಧ ಹಂತದ ಅಧಿಕಾರಿಗಳಾದ ಮುಖ್ಯಶಿಕ್ಷಕರಿಂದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ), ಬಿಇಒಗಳಿಂದ ಉಪನಿರ್ದೇಶಕ (ಡಿಡಿಪಿಐ), ಡಿಡಿಪಿಐಗಳಿಂದ ಜಂಟಿ ನಿರ್ದೇಶಕ (ಜೆಡಿಪಿಐ) ಹುದ್ದೆಗಳಿಗೆ ಬಡ್ತಿಗಾಗಿ ಅಗತ್ಯವಿರುವ ಇಲಾಖಾ ಬಡ್ತಿ ಸಮಿತಿ (ಡಿಪಿಸಿ) ಪ್ರಕ್ರಿಯೆ ಕೈಗೊಳ್ಳಬೇಕು ಎಂದು ಕೋರಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net