ಸಾರ್ವಜನಿಕರ ಕುಂದು ಕೊರತೆ ಸಭೆ

ಕೆ.ಆರ್.ನಗರದ ಎಸ್.ಆರ್.ಎಂ. ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಸೋಮವಾರ ಸಂಜೆ ಆಯೋಜಿಸಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿದರು. ಡಿವೈಎಸ್‌ಪಿ ರಾಜಣ್ಣ, ತಹಸೀಲ್ದಾರ್ ಜಿ.ಸುರೇಂದ್ರ ಮೂರ್ತಿ, ತಾಪಂ ಇಒ ಕುಲದೀಪ್, ಪುರಸಭೆ ಮುಖ್ಯಾಧಿಕಾರಿ ಜಿ.ಎಸ್.ರಮೇಶ್, ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಶಿವಪ್ರಕಾಶ್ ಇತರರು ಇದ್ದರು.
ಕೆ.ಆರ್.ನಗರದ ಎಸ್.ಆರ್.ಎಂ. ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಸೋಮವಾರ ಸಂಜೆ ಆಯೋಜಿಸಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿದರು. ಡಿವೈಎಸ್‌ಪಿ ರಾಜಣ್ಣ, ತಹಸೀಲ್ದಾರ್ ಜಿ.ಸುರೇಂದ್ರ ಮೂರ್ತಿ, ತಾಪಂ ಇಒ ಕುಲದೀಪ್, ಪುರಸಭೆ ಮುಖ್ಯಾಧಿಕಾರಿ ಜಿ.ಎಸ್.ರಮೇಶ್, ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಶಿವಪ್ರಕಾಶ್ ಇತರರು ಇದ್ದರು.
Published on
ಕೆ.ಆರ್.ನಗರ : ಮದ್ಯ ಅಕ್ರಮ ಮಾರಾಟದಿಂದ ತಾಲೂಕಿನಲ್ಲಿ ಆಗುತ್ತಿರುವ ಸಮಸ್ಯೆಗಳಿಗೆ ತುರ್ತಾಗಿ ಪರಿಹಾರ ಕಲ್ಪಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭರವಸೆ ನೀಡಿದರು.
ಪಟ್ಟಣದ ಎಸ್.ಆರ್.ಎಂ. ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಸೋಮವಾರ ಸಂಜೆ ಆಯೋಜಿಸಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ದೂರುಗಳನ್ನು ಆಲಿಸಿದ ನಂತರ ಮಾತನಾಡಿದರು. ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲೂಕಿನ ಜನರು ಹೆಚ್ಚಾಗಿ ಅಕ್ರಮ ಮದ್ಯ ಮಾರಾಟದ ಸಮಸ್ಯೆಗಳ ಕುರಿತಾಗಿಯೇ ದೂರನ್ನು ನೀಡಿದ್ದಾರೆ. ಈ ಸಂಬಂಧ ಅಬಕಾರಿ ಡಿ.ಸಿ.ಗಮನಕ್ಕೆ ತಂದು ಸೂಕ್ತ ಪರಿಹಾರ ಕಲ್ಪಿಸಲು ಕ್ರಮ ವಹಿಸುವೆ ಎಂದರು. ಒಂದು ವಾರದಲ್ಲೇ ಅವಳಿ ತಾಲೂಕುಗಳ ಒಂದು ಗ್ರಾಮ ಪಂಚಾಯತಿ ಮಟ್ಟದಲ್ಲಿ ಪೊಲೀಸ್ ಇಲಾಖೆಯಿಂದ ಸಾರ್ವಜನಿಕ ಸಭೆ ನಡೆಸಲಾಗುತ್ತದೆ. ಮೈಕ್ರೋ ಫೈನಾನ್ಸ್‌ಗಳ ಕಿರುಕುಳದ ಬಗ್ಗೆಯೂ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಪ್ರಕರಣ:
ಹಲವು ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳು ಗ್ರಾಮೀಣ ಭಾಗದ ಸಾಲಗಾರರ ಮನೆಗಳಿಗೆ ಹೋಗಿ, ಅವರನ್ನು ಅವಮಾನ ಮಾಡಿ ಹಣ ಕೇಳುತ್ತಿದ್ದಾರೆ. ಅಂತಹ ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಕೇಸು ದಾಖಲಿಸಲಾಗುವುದು ಎಂದು ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಸಿದರು. ಬೈಕ್ ಮತ್ತು ಇತರ ವಾಹನಗಳನ್ನು ತಾಲೂಕಿನಲ್ಲಿ ಎಲ್ಲೆಂದರಲ್ಲಿ ಅಡ್ಡಗಟ್ಟಿ ಸಾಲ ವಸೂಲಾತಿಗಾಗಿ ಸೀಜ್ ಮಾಡುವ ಖಾಸಗಿ ಹಣಕಾಸು ಸಂಸ್ಥೆಗಳ ವಿರುದ್ಧ ನೊಂದವರು ದೂರು ನೀಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮ ವಹಿಸುವುದಾಗಿ ಎಸ್ಪಿ ಎಚ್ಚರಿಕೆ ನೀಡಿದರು.
ಠಾಣೆ ಮಂಜೂರಾತಿಗೆ ಪ್ರಸ್ತಾವನೆ:
ಜಿಲ್ಲೆಯ ಪ್ರತಿ ತಾಲೂಕಿನ ಠಾಣೆಗಳಿಗೂ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆ ಕೇಳಿ, ಅಹವಾಲು ಆಲಿಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಈಗಾಗಲೇ ಕ್ರಮ ವಹಿಸಿದ್ದೇನೆ. ಕೆ.ಆರ್.ನಗರ ವಿಧಾನಸಭಾ ಕ್ಷೇತದಲ್ಲಿ ಎರಡು ಠಾಣೆಗಳಿದ್ದು, ಗ್ರಾಮಾಂತರ ಠಾಣೆ ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅಪರಾಧ ತಡೆಗೆ ಸೂಕ್ತ ಕ್ರಮ ವಹಿಸುವೆ ಎಂದು ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು.
ದೇವಾಲಯಗಳಲ್ಲಿ ತಾರತಮ್ಯ :
ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲೂಕಿನ ಕೆಲವು ದೇವಸ್ಥಾನಗಳಲ್ಲಿ ದಲಿತ ಸಮುದಾಯದವರ ಮೇಲೆ ಜಾತಿ ತಾರತಮ್ಯ ಮಾಡುತ್ತಿದ್ದಾರೆ. ಈ ರೀತಿಯ ವಿಷಯಗಳ ಬಗ್ಗೆ ಜಾಗೃತಿ ಮೂಡಿಸು ವಂತಾಗಬೇಕೆಂದು ಮುಖಂಡರು ಆಗ್ರಹಿಸಿದರು. ಪಟ್ಟಣದಲ್ಲಿ ಸಂಚಾರ ಪೊಲೀಸ್ ಠಾಣೆ ಆರಂಭಿಸಬೇಕು. ಅಡ್ಡಾದಿಡ್ಡಿಯಾಗಿ ವಾಹನಗಳ ಪಾರ್ಕಿಂಗ್ ಮಾಡುವವರ ವಿರುದ್ಧ ಕ್ರಮ ವಹಿಸಬೇಕು. ಕೆಲವು ರಸ್ತೆಗಳನ್ನು ಏಕಮುಖ ಸಂಚಾರ ರಸ್ತೆಯನ್ನಾಗಿ ಮಾಡಬೇಕು ಎಂದು ಮನವಿ ಸಲ್ಲಿಸಲಾಯಿತು. ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವುದು, ಬೀಟ್ ಪೊಲೀಸ್ ನಿಯೋಜನೆ, ಫುಟ್‌ಪಾತ್ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಗಮನ ಸೆಳೆದರು.
ಡಿವೈಎಸ್‌ಪಿ ರಾಜಣ್ಣ, ತಹಸೀಲ್ದಾರ್ ಜಿ.ಸುರೇಂದ್ರ ಮೂರ್ತಿ, ತಾಪಂ ಇಒ ಕುಲದೀಪ್, ಪುರಸಭೆ ಮುಖ್ಯಾಧಿಕಾರಿ ಜಿ.ಎಸ್.ರಮೇಶ್, ಪುರಸಭೆ ಮಾಜಿ ಅಧ್ಯಕ್ಷ ಪ್ರಕಾಶ್, ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಶಿವಪ್ರಕಾಶ್, ಸಬ್ ಇನ್ಸ್‌ಪೆಕ್ಟರ್ ಸ್ವಾಮೇಗೌಡ, ಸಾಲಿಗ್ರಾಮ ಸಬ್ ಇನ್ಸ್‌ಪೆಕ್ಟರ್ ವಿಜಯರಾಜ್, ಸಮಾಜ ಕಲ್ಯಾಣ ಇಲಾಖೆ ಡಿಇಒ ರವಿ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಚೀರ್ನಹಳ್ಳಿ ಶಿವಣ್ಣ, ರೈತ ಪರ್ವ ಸಂಘಟನೆ ಗೌರವಾಧ್ಯಕ್ಷ ಎಂ.ಕುಮಾರ್, ದಸಂಸ ಸಂಚಾಲಕ ದಿವಾಕರ್ ಇತರರು ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net