ಮೂರ್ತಿ ವಿಸರ್ಜನೆಗೂ ಮುನ್ನ ಹೂವು, ಹಣ್ಣು, ಬಾಳೆಕಂಬ ಸೇರಿದಂತೆ ಪೂಜಾ ಸಾಮಗ್ರಿಗಳ ಹಸಿಕಸವನ್ನು ಪ್ರತ್ಯೇಕಿಸಿ, ಸ್ಥಳೀಯ ಸಂಸ್ಥೆಗಳ ಕಸ ವಿಲೇವಾರಿ ವಾಹನಗಳಿಗೆ ನೀಡಬೇಕು. ಸಾರ್ವಜನಿಕರು ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿಗಳನ್ನು ಮಾತ್ರ ಬಳಸಿ, ಶ್ರದ್ಧೆ ಹಾಗೂ ಪರಿಸರ ಕಾಳಜಿಯೊಂದಿಗೆ ಗೌರಿ-ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಅವರು ಮನವಿ ಮಾಡಿದರು.