

ಗಂಧನಹಳ್ಳಿ: ಸೆಸ್ಕ್ ಸಾಲಿಗ್ರಾಮ ಉಪವಿಭಾಗದ 66/11 ಕೆ ವಿ ಸ್ವೀಕರಣ ಕೇಂದ್ರದಲ್ಲಿ ತ್ರೈವಾಸಿಕ ನಿರ್ವಹಣೆ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಾಲಿಗ್ರಾಮ ಉಪವಿಭಾಗದ ವ್ಯಾಪ್ತಿಗೆ ಒಳಪಡುವ ಗಂಧನಹಳ್ಳಿ, ಅಂಕನಹಳ್ಳಿ, ನರಚನಹಳ್ಳಿ ಹಾಗೂ ಮಿರ್ಲೆ ಗ್ರಾಮ ಪಂಚಾಯಿತಿಯ ಗ್ರಾಮಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಧುಸೂದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.