ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು

 ಮುತ್ತಿನಮುಳುಸೋಗೆಯಿಂದ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಹಿನ್ನೆಲೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಲಾಯಿತು.
ಮುತ್ತಿನಮುಳುಸೋಗೆಯಿಂದ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಹಿನ್ನೆಲೆಯಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಲಾಯಿತು.
Published on
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಮಹತ್ವಾಕಾಂಕ್ಷಿಯ ಮುತ್ತಿನಮುಳುಸೋಗೆಯಿಂದ 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಹಾರಂಗಿ ನೀರಾವರಿ ಇಲಾಖೆಯ ಅಧಿಕಾರಿಗಳು ಪ್ರಾಯೋಗಿಕ (ಪರೀಕ್ಷಾರ್ಥ) ಚಾಲನೆ ನೀಡಿದ್ದು, ಆರಂಭಿಕ ಹಂತದಲ್ಲೇ ಉತ್ತಮ ಫಲಿತಾಂಶ ದೊರೆತಿದೆ.
ಈ ಯೋಜನೆ 2016ರಲ್ಲಿ ಪಿರಿಯಾಪಟ್ಟಣ ಶಾಸಕ ಕೆ.ವೆಂಕಟೇಶ್ ಅವರು ಮಂಜೂರು ಮಾಡಿಸಿದ್ದರು. ಹಲವು ವರ್ಷಗಳ ನಿರೀಕ್ಷೆಯ ಬಳಿಕ ಯೋಜನೆ ಇದೀಗ ಕಾರ್ಯರೂಪಕ್ಕೆ ಬಂದಿದ್ದು, ಪ್ರಾಯೋಗಿಕವಾಗಿ ನೀರು ಹರಿಸುವ ಕಾರ್ಯ ನಡೆಯುತ್ತಿದೆ. ಜು. 5ರಿಂದ ಯೋಜನೆಯಡಿ ಕೆರೆಗಳಿಗೆ ನೀರು ಹರಿಸುವ ಮೂಲಕ ಕಾಲುವೆಗಳ ಸ್ಥಿತಿ, ತಾಂತ್ರಿಕ ದೋಷ ಹಾಗೂ ಇತರ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಯೋಜನೆಯ ಬಲ ಶಾಖೆ ಪೈಪ್ ಕಾಮಗಾರಿ ಇನ್ನೂ ಮುಂದುವರಿದಿದೆ. ಎಡಶಾಖೆ ಪೈಪ್ ಮೂಲಕ ಪ್ರಾಯೋಗಿಕವಾಗಿ ನೀರು ಹರಿಸಲಾಗುತ್ತಿದೆ.
ಈಗಾಗಲೇ ಸುಮಾರು 25ರಿಂದ 30 ಕೆರೆಗಳಿಗೆ ನೀರು ಹರಿದಿದ್ದು, ಅವುಗಳಲ್ಲಿ ಐದು ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ. ಪ್ರಾಯೋಗಿಕ ಪರೀಕ್ಷೆಯ ಫಲಿತಾಂಶ ತೃಪ್ತಿಕರವಾಗಿದ್ದು, ಯಾವುದೇ ಸಮಸ್ಯೆ ಇಲ್ಲದ ಬಳಿಕ ಸಂಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ವಿಜಯವಾಣಿಗೆ ಹಾರಂಗಿ ಇಲಾಖೆಯ ಎಐಇ ಗೋಕುಲ್ ಕುಡುವ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net