ಕರ್ನಾಟಕ ಪ್ರತಿಭಾ ಅಕಾಡೆಮಿಯಿಂದ ಪ್ರತಿಭಾ ಪುರಸ್ಕಾರ

ಕರ್ನಾಟಕ ಪ್ರತಿಭಾ ಅಕಾಡೆಮಿ ವತಿಯಿಂದ ಮೈಸೂರಿನ ಜೆಎಲ್‌ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಗುರುವಾರ ಪ್ರತಿಭಾ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಕೆ. ಹರೀಶ್ ಗೌಡ, ಎಸ್.ಸಿ. ಬಸವರಾಜು, ಪುರುಷೋತ್ತಮ್, ದ್ಯಾವಪ್ಪ ನಾಯಕ ಹಾಗೂ ಇತರರು ಇದ್ದರು.
ಕರ್ನಾಟಕ ಪ್ರತಿಭಾ ಅಕಾಡೆಮಿ ವತಿಯಿಂದ ಮೈಸೂರಿನ ಜೆಎಲ್‌ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಗುರುವಾರ ಪ್ರತಿಭಾ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಕೆ. ಹರೀಶ್ ಗೌಡ, ಎಸ್.ಸಿ. ಬಸವರಾಜು, ಪುರುಷೋತ್ತಮ್, ದ್ಯಾವಪ್ಪ ನಾಯಕ ಹಾಗೂ ಇತರರು ಇದ್ದರು.
Published on
ಮೈಸೂರು: ಕರ್ನಾಟಕ ಪ್ರತಿಭಾ ಅಕಾಡೆಮಿ ವತಿಯಿಂದ ನಗರದ ಜೆಎಲ್‌ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಗುರುವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಕೆ. ಹರೀಶ್ ಗೌಡ ಮಾತನಾಡಿ, ಸಚಿವ ಸತೀಶ್ ಜಾರಕಿಹೊಳಿ ಅವರು ತಾಯಿ ಹೃದಯ ಹೊಂದಿರುವವರು. ಅವರು ಎಲ್ಲ ಸಮುದಾಯದ ಪ್ರತಿಭಾವಂತ ಮಕ್ಕಳನ್ನು ಪ್ರೋತ್ಸಾಹಿಸಲು ಕರ್ನಾಟಕ ಪ್ರತಿಭಾ ಅಕಾಡೆಮಿ ಮೂಲಕ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಶ್ಲಾಘನೀಯ ಎಂದರು.
ಸತೀಶ್ ಜಾರಕಿಹೊಳಿ ನಾಯಕ ಸಮುದಾಯಕ್ಕೆ ಸೇರಿದ ವ್ಯಕ್ತಿಯಾದರೂ ಎಲ್ಲ ಸಮುದಾಯದ ಅಭಿವೃದ್ಧಿಗೆ ಅವರು ಶ್ರಮಿಸುತ್ತಿದ್ದಾರೆ. ಮೂಢ ನಂಬಿಕೆಯ ವಿರುದ್ಧ ಅವರು ದೊಡ್ಡ ಮಟ್ಟದಲ್ಲಿ ಜಾಗೃತಿಯನ್ನು ಮೂಡಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಾನವ ಬಂಧುತ್ವ ವೇದಿಕೆ ಅಧ್ಯಕ್ಷ ದ್ಯಾವಪ್ಪ ನಾಯಕ, ವಿವಿಧ ಸಮುದಾಯದ ಸಂಘಟನೆಗಳು ಆಯಾ ಸಮುದಾಯ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದಾರೆ. ಆದರೆ, ಅತಿ ಸಣ್ಣ ಸಮುದಾಯದ ಸಾಕಷ್ಟು ಮಕ್ಕಳು ಇಂತಹ ಪ್ರತಿಭಾ ಪುರಸ್ಕಾರಗಳಿಂದ ವಂಚಿತರಾಗುತ್ತಿರುವು ದನ್ನು ಗಮನಿಸಿ ಎಲ್ಲ ಸಮುದಾಯದ ಮಕ್ಕಳಿಗೂ ಪ್ರತಿಭಾ ಪುರಸ್ಕಾರ ದೊರೆಯಬೇಕು ಎಂಬ ಉದ್ದೇಶದಿಂದ ಸಚಿವ ಸತೀಶ್ ಜಾರಕಿಹೊಳಿ ಅವರು ಕರ್ನಾಟಕ ಪ್ರತಿಭಾ ಅಕಾಡೆಮಿ ಮೂಲಕ ಪ್ರತಿಭಾ ಪುರಸ್ಕಾರ ನೀಡುತ್ತಿದ್ದಾರೆ ಎಂದು ಹೇಳಿದರು.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು, ಮಾಜಿ ಮೇಯರ್ ಪುರುಷೋತ್ತಮ್, ಮಾನವ ಬಂಧುತ್ವ ವೇದಿಕೆ ಅಧ್ಯಕ್ಷ ಜಿಲ್ಲಾ ಸಂಚಾಲಕ ಪರಮೇಶ, ಮಹಿಳಾ ಘಟಕದ ಅಧ್ಯಕ್ಷೆ ಮನೋನ್ಮಣಿ, ವಿವಿಧ ಸಮುದಾಯದ ಮುಖಂಡರಾದ ನಾಗರಾಜು, ಬಿ.ಜಿ. ಕೇಶವ, ಶ್ರೀಧರ್ ಚಾಮುಂಡಿಬೆಟ್ಟ ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net