ಗರ್ಭ ಪೂರ್ವ, ಪ್ರಸವಪೂರ್ವ ಲಿಂಗ ಪತ್ತೆ ಅಪರಾಧ

ಭ್ರೂಣ ಲಿಂಗ ಪತ್ತೆ ಕಾನೂನಿಗೆ ವಿರುದ್ಧ ಮತ್ತು ಶಿಕ್ಷಾರ್ಹ ಅಪರಾಧ ಕುರಿತು ಬೆಟ್ಟದಪುರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರಿವು ಮೂಡಿಸಲಾಯಿತು. ಲತಾ, ಕೃಷ್ಣೇಗೌಡ, ಭರತ್‌ರಾಜೇ ಅರಸ್, ಕಾವ್ಯಾ, ಕುಮಾರ್, ದೇವಕಿ, ಚೆನ್ನಮ್ಮ, ಮಹಾದೇವ ಇದ್ದರು.
ಭ್ರೂಣ ಲಿಂಗ ಪತ್ತೆ ಕಾನೂನಿಗೆ ವಿರುದ್ಧ ಮತ್ತು ಶಿಕ್ಷಾರ್ಹ ಅಪರಾಧ ಕುರಿತು ಬೆಟ್ಟದಪುರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರಿವು ಮೂಡಿಸಲಾಯಿತು. ಲತಾ, ಕೃಷ್ಣೇಗೌಡ, ಭರತ್‌ರಾಜೇ ಅರಸ್, ಕಾವ್ಯಾ, ಕುಮಾರ್, ದೇವಕಿ, ಚೆನ್ನಮ್ಮ, ಮಹಾದೇವ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪಿರಿಯಾಪಟ್ಟಣ ತಾಲೂಕು ಆರೋಗ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಲತಾ
  • ಪ್ರಥಮ ದರ್ಜೆ ಕಾಲೇಜಿನಲ್ಲಿ
ಬೆಟ್ಟದಪುರ: ಗರ್ಭ ಪೂರ್ವ ಹಾಗೂ ಪ್ರಸವ ಪೂರ್ವ ಲಿಂಗ ಪತ್ತೆ ಮಾಡುವುದು ಮತ್ತು ಹೆಣ್ಣು ಭ್ರೂಣ ಹತ್ಯೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಪಿರಿಯಾಪಟ್ಟಣ ತಾಲೂಕು ಆರೋಗ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಲತಾ ಹೇಳಿದರು.
ಭ್ರೂಣ ಲಿಂಗ ಪತ್ತೆ ಕಾನೂನಿಗೆ ವಿರುದ್ಧ ಮತ್ತು ಶಿಕ್ಷಾರ್ಹ ಅಪರಾಧ ಕುರಿತು ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆಯಿಂದ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಲಿಂಗ ಅನುಪಾತದಲ್ಲಿ ಏರುಪೇರಾಗಿ ಸಮಾಜದಲ್ಲಿ ಸಾಕಷ್ಟು ಸಮಸ್ಯೆಗಳು ಸಷ್ಟಿಯಾಗುತ್ತದೆ. ಮಹಿಳೆಯರ ಮೇಲೆ ಅತ್ಯಾಚಾರ, ವಿವಾಹ ವಿಚ್ಛೇದನ ಸೇರಿದಂತೆ ಹಲವು ಸಮಸ್ಯೆಗಳು ಹೆಚ್ಚಾಗುತ್ತವೆ. ಇವುಗಳಿಂದ ದೇಶದ ಅಭಿವದ್ಧಿ ಕುಂಠಿತವಾಗುತ್ತದೆ. ಸಾಮಾಜಿಕ ಸಮತೋಲನಕ್ಕೆ ಗಂಡು ಮತ್ತು ಹೆಣ್ಣು ಮಕ್ಕಳ ಸಂಖ್ಯೆ ಸಮನಾಗಿರ ಬೇಕು. ಲಿಂಗಾನುಪಾತದಲ್ಲಿ ವ್ಯತ್ಯಾಸವಾದರೆ ಸಂಘರ್ಷಗಳಿಗೆ ಕಾರಣವಾಗುತ್ತದೆ. ಹಾಗಾಗಿ ಸಾಮಾಜಿಕ ಅಸಮತೋಲನ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.
ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರ ವಿಧಾನಗಳ (ಲಿಂಗ ಆಯ್ಕೆ ನಿಷೇಧ) ಕಾಯ್ದೆ 1994 ಕುರಿತು ಜಿಲ್ಲಾ ಮಟ್ಟದ ಐ.ಇ.ಸಿ ಚಟುವಟಿಕೆಯನ್ನು ತಾಲೂಕು, ಹೋಬಳಿ ಮಟ್ಟದಲ್ಲಿ ನಡೆಸಿ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಲು ಕಾಲೇಜಿನ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಗಿದೆ. ಭಾರತದಲ್ಲಿ ಹೆಣ್ಣು ಭ್ರೂಣಹತ್ಯೆಯನ್ನು ತಡೆಯಲು ಮತ್ತು ಲಿಂಗ ಅನುಪಾತವನ್ನು ಸುಧಾರಿಸಲು ಪಿಸಿಪಿಎನ್‌ಡಿಟಿ ಕಾಯ್ದೆಯನ್ನು ಜಾರಿಗೆ ತರಲಾಯಿತು. ಇದು ಗರ್ಭಧಾರಣೆಯ ಮೊದಲು ಅಥವಾ ನಂತರ ಭ್ರೂಣದ ಲಿಂಗ ಪತ್ತೆ ಹಚ್ಚುವುದು ಮತ್ತು ಜಾಹೀರಾತು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸುತ್ತದೆ ಎಂದು ಮಾಹಿತಿ ನೀಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೃಷ್ಣೆಗೌಡ, ಕಾಲೇಜು ಪ್ರಾಂಶುಪಾಲ ಭರತ್‌ರಾಜೇ ಅರಸ್, ಪ್ರಾಧ್ಯಾಪಕಿ ಕಾವ್ಯಾ, ಆರೋಗ್ಯ ನಿರೀಕ್ಷಣಾಧಿಕಾರಿ ಕುಮಾರ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ಚೆನ್ನಮ್ಮ, ದೇವಕಿ, ಮಹಾದೇವ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net