ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಎಚ್‌ಡಿಕೆ ಸ್ಪರ್ಧಿಸಬೇಕೆಂಬ ಒತ್ತಡವಿದೆ
ಮೈಸೂರು: ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಹಾಗೂ ಈ ಭಾಗದಲ್ಲಿ ಹೆಚ್ಚಿನ ಶಕ್ತಿ ತುಂಬಬೇಕಾದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಬೇಕೆಂಬ ಒತ್ತಡ ಇದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಹೇಳಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಜಿಪಂ ಮಾಜಿ ಸದಸ್ಯ ಎಸ್.ಮಾದೇಗೌಡ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು
ಚಾಮುಂಡೇಶ್ವರಿ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಈ ಭಾಗದಲ್ಲಿ ಪಕ್ಷಕ್ಕೆ ಶಕ್ತಿ ಬರಲಿದೆ ಎನ್ನುವುದನ್ನು ಹೇಳುತ್ತಾರೆ. ಅವರು ಬಂದರೆ ಹೆಚ್ಚಿನ ಸ್ಥಾನ ಗೆಲ್ಲಲು ಸಾಧ್ಯವಾಗಲಿದೆ ಎಂದರು.
ಈಗ ನಮ್ಮೆಲ್ಲರ ಜವಾಬ್ದಾರಿ ಪಕ್ಷ ಸಂಘಟನೆ ಮಾಡುವುದಾಗಿದೆ. ಪಕ್ಷ ಮುಖ್ಯವಾಗಿದೆ. ಆದ್ದರಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸುತ್ತೇವೆ. ತೀರ್ಮಾನ ಅವರದು ಎಂದರು.